ಚೆನ್ನೈ: ತಮಿಳುನಾಡಿನ ಮೈಲಾಡುತುರೈ ಜಿಲ್ಲೆಯ ಪಟಾಕಿ ಅಂಗಡಿಯೊಂದರಲ್ಲಿ ಬುಧವಾರ ಸ್ಫೋಟ ಸಂಭವಿಸಿದ್ದು, ನಾಲ್ಕು ಮಂದಿ ಮೃತಪಟ್ಟಿದ್ದಾರೆ.
ಪಟಾಕಿಗಳನ್ನು ಪ್ಯಾಕ್ ಮಾಡುವ ವೇಳೆ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಇನ್ನೂ ನಾಲ್ವರು ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಮೃತರಿಗೆ ಸಂತಾಪ ಸೂಚಿಸಿ, ಅವರ ಕುಟುಂಬಗಳಿಗೆ ತಲಾ ₹ 3 ಲಕ್ಷ ಪರಿಹಾರ ಘೋಷಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.