ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜಾರ್ಖಂಡ್‌: ಕಟ್ಟಡ ಕುಸಿತ, 3 ಸಾವು

Published 7 ಜುಲೈ 2024, 15:49 IST
Last Updated 7 ಜುಲೈ 2024, 15:49 IST
ಅಕ್ಷರ ಗಾತ್ರ

ದೇವಘರ್‌(ಜಾರ್ಖಂಡ್‌): ಜಾರ್ಖಂಡ್‌ನ ದೇವಘರ್‌ನಲ್ಲಿ ಭಾನುವಾರ ಎರಡು ಮಹಡಿಯ ಕಟ್ಟಡವೊಂದು ಕುಸಿದುಬಿದ್ದ ಪರಿಣಾಮ ಮೂವರು ಮೃತಪಟ್ಟಿದ್ದು, 8 ಮಂದಿ ಗಾಯಗೊಂಡಿದ್ದಾರೆ.

‘ಮುಂಜಾನೆ ಕಟ್ಟಡ ಕುಸಿದುಬಿದ್ದಿದ್ದು, 11 ಜನರು ಅವಶೇಷಗಳಡಿ ಸಿಲುಕಿದ್ದರು. ಬೆಳಿಗ್ಗೆ 6 ಗಂಟೆಗೆ ಆರಂಭವಾದ ಕಾರ್ಯಾಚರಣೆ ಸಂಜೆ 4 ಗಂಟೆಗೆ ಮುಕ್ತಾಯವಾಯಿತು’ ಎಂದು ದೇವಘರ್‌ನ ಜಿಲ್ಲಾಧಿಕಾರಿ ವಿಶಾಲ್‌ ಸಾಗರ್‌ ತಿಳಿಸಿದ್ದಾರೆ.

‘4 ಮಕ್ಕಳನ್ನು ಸ್ಥಳೀಯರು ರಕ್ಷಿಸಿದ್ದು, ತಕ್ಷಣ ಸ್ಥಳಕ್ಕೆ ಧಾವಿಸಿದ ವಿಪತ್ತು ನಿರ್ವಹಣಾ ಪಡೆಯು 7 ಜನರನ್ನು ಅವಶೇಷಗಳ ಅಡಿಯಿಂದ ಹೊರತೆಗೆದಿದೆ’ ಎಂದು ಮಾಹಿತಿ ನೀಡಿದರು.

‘ಏಳು ಜನರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ದೇವಘರ್‌ ವೈದ್ಯ ರಂಜನ್‌ ಸಿನ್ಹಾ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT