ಜೈಪುರ: ರಾಜಸ್ಥಾನದ ಪ್ರತಾಪ್‌ಗಢ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ಐದು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಉದಯಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಚೋಟಿ ಸದ್ಡಿ ಪ್ರದೇಶದಲ್ಲಿ ಘಟನೆ ನಡೆದಿದ್ದು, ಮನೆ ಹಾನಿಗೀಡಾಗಿದೆ ಎಂದು ಅವರು ತಿಳಿಸಿದ್ದಾರೆ.
ರಾಧೇಶ್ಯಾಮ್ ಪ್ರಜಾಪತ್ ಎಂಬವರ ಮನೆಯಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟ ಸಂಭವಿಸಿದೆ.
ಸಿಲಿಂಡರ್ ಸ್ಫೋಟಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.