ಆಗಸ್ಟ್ 31 ರಿಂದ ಸೆಪ್ಟೆಂಬರ್ 3ರ ನಡುವೆ ದಾಖಲಾದ ಮಳೆಯ ಆಧಾರದ ಮೇಲೆ ರಾಜ್ಯದ 33 ಜಿಲ್ಲೆಗಳ ಪೈಕಿ 29 ಜಿಲ್ಲೆಗಳನ್ನು ಪ್ರವಾಹ ಪೀಡಿತ ಎಂದು ಘೋಷಿಸಲಾಗಿದೆ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸಂತಿ ಕುಮಾರಿ ತಿಳಿಸಿದ್ದಾರೆ.
ಪ್ರವಾಹ ಪೀಡಿತ ಜಿಲ್ಲೆಗಳಿಗೆ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ತಲಾ ₹3 ಕೋಟಿ ಬಿಡುಗಡೆ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಭಾರಿ ಮಳೆ ಮತ್ತು ಪ್ರವಾಹದಿಂದ ರಾಜ್ಯದಲ್ಲಿ ಉಂಟಾಗಿರುವ ಹಾನಿ ಕುರಿತು ಸೋಮವಾರ ಮಧ್ಯಾಹ್ನದ ಒಳಗೆ ವರದಿ ಸಲ್ಲಿಸುವಂತೆ ಹಿರಿಯ ಅಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಮಳೆ ಮತ್ತು ಪ್ರವಾಹದಲ್ಲಿ ಮೃತಪಟ್ಟ ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ ನೀಡಲಾಗುವುದು. ಮೃತಪಟ್ಟ 29 ಜನರ ವಿವರಗಳನ್ನು ಕಳುಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕುಮಾರಿ ತಿಳಿಸಿದ್ದಾರೆ.
ಪ್ರವಾಹ ಪೀಡಿತ ಜಿಲ್ಲೆಗಳಿಗೆ ಪರಿಹಾರ ಮತ್ತು ಪುನರ್ವಸತಿ ಒದಗಿಸುವ ಕ್ರಮಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರು ಸೋಮವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಪ್ರಾಥಮಿಕ ವರದಿ ಪ್ರಕಾರ, ಮಳೆ ಮತ್ತು ಪ್ರವಾಹದಿಂದಾಗಿ ರಾಜ್ಯದಲ್ಲಿ ಈವರೆಗೆ ₹5,438 ಕೋಟಿ ನಷ್ಟ ಅಂದಾಜಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.