ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು ಮತ್ತು ಕಾಶ್ಮೀರ: ಕಂದಕಕ್ಕೆ ಉರುಳಿದ ಬಸ್, 9 ಸಾವು

Last Updated 14 ಸೆಪ್ಟೆಂಬರ್ 2022, 6:21 IST
ಅಕ್ಷರ ಗಾತ್ರ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಮಿನಿ ಬಸ್ ಕಂದಕಕ್ಕೆ ಬಿದ್ದು ಒಂಬತ್ತು ಮಂದಿ ಮೃತಪಟ್ಟಿದ್ದು, 27 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

36 ಪ್ರಯಾಣಿಕರನ್ನು ಹೊತ್ತುಕೊಂಡು ಗಾಲಿ ಮೈದಾನದಿಂದ ಪೂಂಚ್‌ಗೆ ಸಂಚರಿಸುತ್ತಿದ್ದ ಬಸ್, ಸಾವ್‌ಜಿಯಾ ಗಡಿ ಪ್ರದೇಶದ ಬ್ರಾರಿ ನಾಲಾ ಬಳಿ ಕಂದಕಕ್ಕೆ ಉರುಳಿದೆ ಎಂದು ಹೇಳಿದ್ದಾರೆ.

ಭಾರತೀಯ ಸೇನೆ, ಪೊಲೀಸ್ ಪಡೆ ಹಾಗೂ ಸ್ಥಳೀಯರು ಜಂಟಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಬಸ್ ಅವಘಡಕ್ಕೆ ಸಂತಾಪ ಸೂಚಿಸಿರುವ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಮೃತರ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ಘೋಷಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT