ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು | ಕಮರಿಗೆ ಉರುಳಿದ ಎಸ್‌ಯುವಿ ಕಾರು; 10 ಮಂದಿ ಸಾವು

Published 29 ಮಾರ್ಚ್ 2024, 6:41 IST
Last Updated 29 ಮಾರ್ಚ್ 2024, 6:41 IST
ಅಕ್ಷರ ಗಾತ್ರ

ಬನಿಹಲ್ (ಜಮ್ಮು): ಎಸ್‌ಯುವಿ ಕಾರು ಕಮರಿಗೆ ಉರುಳಿ 10 ಮಂದಿ ಮೃತಪಟ್ಟ ಘಟನೆ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯ ಬ್ಯಾಟರಿ ಚಶ್ಮಾ ಪ್ರದೇಶದಲ್ಲಿ ಗುರುವಾರ ಮಧ್ಯರಾತ್ರಿ 1.15ರ ಸುಮಾರಿಗೆ ಘಟನೆ ಸಂಭವಿಸಿದೆ.

ಸ್ಕಿಡ್ ಆದ ಷೆವರ್ಲೆ ಟವೆರಾ ಕಾರು, 300 ಅಡಿ ಆಳದ ಕಮರಿಗೆ ಉರುಳಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸ್ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್‌) ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಭಾರಿ ಮಳೆಯ ನಡುವೆ 10 ಪ್ರಯಾಣಿಕರ ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.

ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT