ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈ:ಬಿರುಗಾಳಿಗೆ ಕುಸಿದುಬಿದ್ದ ಹೋರ್ಡಿಂಗ್; ಮೂವರ ಸಾವು,ಹಲವರು ಸಿಲುಕಿರುವ ಶಂಕೆ

Published 13 ಮೇ 2024, 16:26 IST
Last Updated 13 ಮೇ 2024, 16:26 IST
ಅಕ್ಷರ ಗಾತ್ರ

ಮುಂಬೈ: ಮಹಾರಾಷ್ಟ್ರದ ರಾಜಧಾನಿ ಮುಂಬೈನ ಘಾಟ್ಕೊಪರ್‌ ಪ್ರದೇಶದಲ್ಲಿ ಬೃಹತ್ ಪ್ರಮಾಣದ ಕಬ್ಬಿಣದ ಹೋರ್ಡಿಂಗ್ ಮುರಿದುಬಿದ್ದಿದ್ದು, 3 ಮಂದಿ ಸಾವಿಗೀಡಾಗಿದ್ದಾರೆ. 54 ಮಂದಿ ಗಾಯಗೊಂಡಿದ್ದು, 100ಕ್ಕೂ ಅಧಿಕ ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಮಹಾರಾಷ್ಟ್ರದ ಹಲವೆಡೆ ಭಾರೀ ಮಳೆ ಮತ್ತು ಬಿರುಗಾಳಿ ಬೀಸುತ್ತಿದ್ದು, ಮಳೆ ಸಂಬಂಧಿತ ಅವಘಡಗಳಿಗೆ ರಾಜ್ಯ ಸಾಕ್ಷಿಯಾಗಿದೆ.

ಘಾಟ್ಕೋಪರ್ ಪೂರ್ವದ ಪಂತ್ ನಗರದ ಈಸ್ಟರ್ನ್ ಎಕ್ಸ್‌ಪ್ರೆಸ್ ಹೆದ್ದಾರಿಯ ಪೊಲೀಸ್ ಗ್ರೌಂಡ್ ಪೆಟ್ರೋಲ್ ಬಂಕ್ ಮೇಲೆ ಹೋರ್ಡಿಂಗ್ ಬಿದ್ದಿದೆ ಎಂದು ಬೃಹನ್‌ ಮುಂಬೈ ಮಹಾನಗರ ಪಾಲಿಕೆ ಹೇಳಿದೆ.

ಈ ಸಂಬಂಧ ಜಾಹೀರಾತು ಕಂಪನಿ ಇಗೊ ಮೀಡಿಯಾ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ.

ಮತ್ತೊಂದು ಪ್ರಕರಣದಲ್ಲಿ ವಡಾಲಾದಲ್ಲಿ ನಿರ್ಮಾಣ ಹಂತದ ಲೋಹದ ಪಾರ್ಕಿಂಗ್ ಟವರ್ ರಸ್ತೆ ಮೇಲೆ ಕುಸಿದು ಬಿದ್ದಿದ್ದು, ಮೂವರು ಗಾಯಗೊಂಡಿದ್ದಾರೆ.

ಕಡಿಮೆ ಗೋಚರತೆ ಹಿನ್ನೆಲೆಯಲ್ಲಿ ಮುಂಬೈ ವಿಮಾನ ನಿಲ್ದಾಣದಿಂದ ತೆರಳಬೇಕಿದ್ದ ಹಲವು ವಿಮಾನಗಳ ಹಾರಾಟ ವಿಳಂಬವಾಗಿದೆ. 15 ವಿಮಾನಗಳ ಮಾರ್ಗ ಬದಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT