ಶುಕ್ರವಾರ, 23 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ: ಕೈಚೀಲ ತಯಾರಿಕಾ ಕಂಪನಿಯಲ್ಲಿ ಅಗ್ನಿ ಅವಘಡ– 6 ಸಾವು

Published 31 ಡಿಸೆಂಬರ್ 2023, 3:30 IST
Last Updated 31 ಡಿಸೆಂಬರ್ 2023, 3:30 IST
ಅಕ್ಷರ ಗಾತ್ರ

ಮುಂಬೈ: ಮಹಾರಾಷ್ಟ್ರದ ಛತ್ರಪತಿ ಸಾಂಭಾಜಿ ನಗರದಲ್ಲಿರುವ ಹ್ಯಾಂಡ್ ಗ್ಲೌಸ್ ತಯಾರಿಕಾ ಕಂಪನಿಯೊಂದರಲ್ಲಿ ಭಾನುವಾರ ನಸುಕಿನ ಜಾವ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ ಆರು ಕಾರ್ಮಿಕರು ಸಾವಿಗೀಡಾಗಿದ್ದಾರೆ.

ವಲುಜ್ ಕೈಗಾರಿಕಾ ಪ್ರದೇಶದಲ್ಲಿರುವ ಸನ್‌ಶೈನ್ ಎಂಟರ್‌ಪ್ರೈಸಸ್ ಘಟಕದಲ್ಲಿ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ.

ಘಟನೆ ನಡೆದಾಗ 13 ಮಂದಿ ಕಾರ್ಮಿಕರು ಆವರಣದಲ್ಲಿ ಮಲಗಿದ್ದರು. ಅವರಲ್ಲಿ ಆರು ಮಂದಿ ಸಾವಿಗೀಡಾಗಿದ್ದರೆ, ಏಳು ಮಂದಿ ಕಾರ್ಖಾನೆಯ ಮೇಲ್ಛಾವಣಿಯನ್ನು ಒಡೆದು ಹೊರಗೆ ಬರುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

‘ಕಾಟನ್ ಮತ್ತು ಲೆದರ್ ಹ್ಯಾಂಡ್ ಗ್ಲೌಸ್ ತಯಾರಿಸುವ ಸನ್‌ಶೈನ್ ಎಂಟರ್‌ಪ್ರೈಸಸ್ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮಧ್ಯರಾತ್ರಿ 1.15ಕ್ಕೆ ಪೊಲೀಸ್ ನಿಯಂತ್ರಣ ಕೊಠಡಿಗೆ ವಿಷಯ ತಿಳಿಯಿತು’ ಎಂದು ಪೊಲೀಸ್ ಆಯುಕ್ತ ಮನೋಜ್ ಲೋಹಿಯಾ ತಿಳಿಸಿದ್ದಾರೆ.

ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಳಗಿನ ಜಾವ 3.30ರ ವೇಳೆಗೆ ಬೆಂಕಿಯನ್ನು ಹತೋಟಿಗೆ ತಂದಿದೆ.

ಬದುಕುಳಿದ ಕಾರ್ಮಿಕರಿಗೆ ಗಾಯಗಳಾಗಿದ್ದು, ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT