ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಲಂಗಾಣದಲ್ಲಿ 20ಕ್ಕೂ ಹೆಚ್ಚು ಬೀದಿ ನಾಯಿಗಳನ್ನು ಗುಂಡಿಕ್ಕಿ ಹತ್ಯೆ

Published 17 ಫೆಬ್ರುವರಿ 2024, 2:44 IST
Last Updated 17 ಫೆಬ್ರುವರಿ 2024, 2:44 IST
ಅಕ್ಷರ ಗಾತ್ರ

ಹೈದರಾಬಾದ್: ಅಪರಿಚಿತ ವ್ಯಕ್ತಿಗಳು ಸುಮಾರು 20ಕ್ಕೂ ಹೆಚ್ಚು ಬೀದಿ ನಾಯಿಗಳನ್ನು ಗುಂಡು ಹಾರಿಸಿ ಕೊಂದಿರುವ ಘಟನೆ ತೆಲಂಗಾಣದ ಮಹಬೂಬ್‌ನಗರ ಜಿಲ್ಲೆಯ ಪೊನ್ನಕಲ್‌ನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ 5ಕ್ಕೂ ಹೆಚ್ಚು ನಾಯಿಗಳು ಗಾಯಗೊಂಡಿವೆ. ಸ್ಥಳೀಯರು ನೀಡಿದ ದೂರು ಆಧರಿಸಿ ಸ್ಥಳಕ್ಕೆ ಭೇಟಿ ನೀಡಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಅಪರಿಚಿತ ವ್ಯಕ್ತಿಗಳು ಕಾರಿನಲ್ಲಿ ಬಂದು ಈ ಕೃತ್ಯ ಎಸೆಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 429 (ಪ್ರಾಣಿಗಳನ್ನು ಕೊಲ್ಲುವುದು ಅಥವಾ ಅಂಗವಿಕಲಗೊಳಿಸುವುದು), ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ಇತರೆ ಕಾಯ್ದೆಯಡಿ ಅಡ್ಡಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳ ಪತ್ತೆಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT