ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾರ್ಖಂಡ್: ರೈಲ್ವೆ ಹಳಿ ಸ್ಫೋಟಿಸಿದ ಮಾವೋವಾದಿಗಳು

Published 22 ಡಿಸೆಂಬರ್ 2023, 5:35 IST
Last Updated 22 ಡಿಸೆಂಬರ್ 2023, 5:35 IST
ಅಕ್ಷರ ಗಾತ್ರ

ಚೈಬಾಸಾ (ಜಾರ್ಖಂಡ್): ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಮಾವೋವಾದಿಗಳು ರೈಲ್ವೆ ಹಳಿಗಳ ಒಂದು ಭಾಗವನ್ನು ಸ್ಫೋಟಿಸಿದ್ದು, ಹೌರಾ-ಮುಂಬೈ ಮಾರ್ಗದಲ್ಲಿ ರೈಲು ಸಂಚಾರಕ್ಕೆ ಅಡ್ಡಿಯುಂಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯ ರಾಜಧಾನಿ ರಾಂಚಿಯಿಂದ ಸುಮಾರು 150 ಕಿಮೀ ದೂರದಲ್ಲಿರುವ ಗೋಯಿಲ್ಕೆರಾ ಮತ್ತು ಪೊಸೊಯಿಟಾ ರೈಲು ನಿಲ್ದಾಣಗಳ ನಡುವಿನ ಮಾರ್ಗದಲ್ಲಿ ಗುರುವಾರ ಮಧ್ಯರಾತ್ರಿ ಈ ಘಟನೆ ಸಂಭವಿಸಿದೆ ಎಂದು ಪಶ್ಚಿಮ ಸಿಂಗ್‌ಭೂಮ್ ಪೊಲೀಸ್ ವರಿಷ್ಠಾಧಿಕಾರಿ ಅಶುತೋಷ್ ಶೇಖರ್ ತಿಳಿಸಿದ್ದಾರೆ.

‘ಸ್ಥಳದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಮುಂಜಾನೆಯಿಂದಲೇ ರೈಲು ಹಳಿಗಳ ದುರಸ್ತಿ ಕಾರ್ಯ ಪ್ರಾರಂಭಿಸಲಾಗಿದೆ. ಶೀಘ್ರದಲ್ಲೇ ರೈಲು ಸಂಚಾರ ಪುನರಾರಂಭವಾಗಲಿದೆ’ಎಂದು ಅವರು ಹೇಳಿದರು,

ಹಳಿ ಸ್ಫೋಟದ ಬಳಿಕ ಮಾವೋವಾದಿಗಳು ಈ ಪ್ರದೇಶದಲ್ಲಿ ಬ್ಯಾನರ್ ಮತ್ತು ಪೋಸ್ಟರ್‌ಗಳನ್ನು ಸಹ ಹಾಕಿದ್ದಾರೆ.

ಗಮನಾರ್ಹವಾಗಿ, ನಿಷೇಧಿತ ಸಿಪಿಐ(ಮಾವೋವಾದಿ) ಸಂಘಟನೆಯು ಡಿಸೆಂಬರ್ 16ರಿಂದ 'ಪ್ರತಿಭಟನಾ ಸಪ್ತಾಹ'ವನ್ನು ಆಚರಿಸುತ್ತಿದೆ. ಶುಕ್ರವಾರ ಭಾರತ್ ಬಂದ್‌ಗೆ ಕರೆ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT