ಜಲ್ನಾ: ಮರಾಠರ ಬೇಡಿಕೆಗಳನ್ನು ಈಡೇರಿಸಬೇಕೆಂದು ಕೋರಿ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಗೆ ಮತ್ತೆ ಅನಿರ್ದಿಷ್ಟಾವಧಿ ಉಪವಾಸ ಮಾಡುವುದಾಗಿ ಹೇಳಿದ್ದು ದಿನಾಂಕವನ್ನು ಘೋಷಿಸಿದ್ದಾರೆ.

ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ಅಂತರವಾಲಿ ಸಾರತಿ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮರಾಠ ಸಮುದಾಯದವರು ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಬೇಕು ಎಂದರು.

ಯಾರೂ ಮನೆಯಲ್ಲಿ ಉಳಿಯಬಾರದು. ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹಕ್ಕೆ ಬನ್ನಿ, ನಮ್ಮ ಒಕ್ಕೂಟದ ಶಕ್ತಿಯನ್ನು ತೋರಿಸೋಣ ಎಂದು ಹೇಳಿದರು.

ಮುಂಬರುವ ಜನವರಿ 25ರಿಂದ ಅನಿರ್ದಿಷ್ಟಾವಧಿ ಉಪವಾಸ ಆರಂಭಿಸಲಾಗುವುದು ಎಂದು ಜಾರಂಗೆ ಹೇಳಿದರು.

ಸರ್ಕಾರ ತನ್ನ ಭರವಸೆಗಳನ್ನು ಈಡೇರಿಸಲು ವಿಫಲವಾಗಿದೆ ಎಂದು ಆರೋಪಿಸಿದ ಅವರು, ಸರ್ಕಾರ ನಮಗೆ ಮೋಸ ಮಾಡಿದೆ. ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ನಾವು ಅವರನ್ನು ಬಿಡುವುದಿಲ್ಲ ಎಂದು ಹೇಳಿದರು.

ಕಳೆದ ಒಂದು ವರ್ಷದಲ್ಲಿ ಆರು ಉಪವಾಸ ಸತ್ಯಾಗ್ರಹಗಳನ್ನು ನಡೆಸಲಾಗಿದೆ. ಇದು ಸ್ವಯಂಪ್ರೇರಿತವಾಗಿದ್ದು ಮರಾಠಾ ಸಮುದಾಯದ ಯಾವುದೇ ಸದಸ್ಯರು ಭಾಗವಹಿಸಬಹುದು ಎಂದು ಒತ್ತಿಹೇಳಿದರು. ಯಾರು ಬೇಕಾದರೂ ಸೇರಬಹುದು. ಯಾರ ಮೇಲೂ ಬಲವಂತ ಅಥವಾ ಒತ್ತಡವಿಲ್ಲ ಎಂದು ಜಾರಂಗೆ ಸ್ಪಷ್ಟಪಡಿಸಿದರು.

ಇದೇ ವರ್ಷ ಫೆಬ್ರುವರಿಯಲ್ಲಿ ಶಿಕ್ಷಣ, ಸರ್ಕಾರಿ ಉದ್ಯೋಗಗಳಲ್ಲಿ ಮರಾಠಾಗಳಿಗೆ ಪ್ರತ್ಯೇಕ ವರ್ಗದ ಅಡಿಯಲ್ಲಿ ಶೇ. 10ರಷ್ಟು ಮೀಸಲಾತಿ ಒದಗಿಸುವ ಮಸೂದೆಯನ್ನು ಮಹಾರಾಷ್ಟ್ರ ಸರ್ಕಾರ ಅಂಗೀಕರಿಸಿದೆ. ಆದರೆ ಜರಾಂಗೆ ಅವರು ಮರಠಾ ಸಮುದಾಯಕ್ಕೆ ಓಬಿಸಿ ಅಡಿಯಲ್ಲಿ ಮೀಸಲಾತಿ ನೀಡುವಂತೆ ಒತ್ತಾಯಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.