ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮರಾಠರಿಗೆ ಒಬಿಸಿ ಮೀಸಲಾತಿ ಸೌಲಭ್ಯ ಸಿಗುವವರೆಗೆ ಉಪವಾಸ ಸತ್ಯಾಗ್ರಹ: ಜಾರಾಂಗೆ

Published 11 ಫೆಬ್ರುವರಿ 2024, 14:38 IST
Last Updated 11 ಫೆಬ್ರುವರಿ 2024, 14:38 IST
ಅಕ್ಷರ ಗಾತ್ರ

ಮುಂಬೈ: ಮರಾಠ ಸಮುದಾಯಕ್ಕೆ ಇತರೆ ಹಿಂದುಳಿದ ವರ್ಗಗಳ ಅಡಿ ಮೀಸಲಾತಿ ಕಲ್ಪಿಸುವುದಾಗಿ ಸರ್ಕಾರ ನೀಡಿರುವ ಭರವಸೆ ಈಡೇರುವವರೆಗೆ ಉಪವಾಸ ಸತ್ಯಾಗ್ರಹ ಮುಂದುವರಿಸುವುದಾಗಿ ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜಾರಾಂಗೆ ಪಾಟೀಲ್ ಅವರು ಹೇಳಿದ್ದಾರೆ. 

ಜಲ್ನಾ ಜಿಲ್ಲೆಯ ಅಂತರ್ವಲಿ ಸಾರಥಿ ಗ್ರಾಮದಲ್ಲಿ ಜಾರಾಂಗೆ ಅವರು ಶನಿವಾರದಿಂದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. 

ಸುದ್ದಿಗಾರರೊಂದಿಗೆ ಭಾನುವಾರ ಮಾತನಾಡಿದ ಅವರು, ‘ಮರಾಠ ಸಮುದಾಯಕ್ಕೆ ಎಲ್ಲ ಸೌಲಭ್ಯಗಳು ಸಿಗುವವರೆಗೆ ಪ್ರತಿಭಟನೆ ಮುಂದುವರಿಯಲಿದೆ’ ಎಂದರು. 

‘ಮರಾಠ ಸಮುದಾಯಕ್ಕೆ ಒಬಿಸಿ ಮೀಸಲಾತಿಯನ್ನು ವಿಸ್ತರಿಸುವ ಕರಡು ಅಧಿಸೂಚನೆಯನ್ನು ಮುಖ್ಯಮಂತ್ರಿ ಏಕನಾಥ ಶಿಂದೆ ಸರ್ಕಾರವು ಹೊರಡಿಸಿದೆ. ಆದರೆ, ಇದಕ್ಕೆ ಕಾಯ್ದೆ ರೂಪ ನೀಡಲು ವಿಳಂಬ ಮಾಡುತ್ತಿದೆ' ಎಂದು ಬೇಸರ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT