ಠಾಣೆ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯಿದೆ ಅಡಿ ನವಿ ಮುಂಬೈನಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಮರಾಠಿ ನಟಿ ಕೇತಕಿ ಚಿತಳೆ ಅವರಿಗೆ ಗುರುವಾರ ಇಲ್ಲಿನ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.

ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಂಚಿಕೊಂಡ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾರಣ ಕೇತಕಿ ಅವರು ಜೈಲಿನಿಂದ ತಕ್ಷಣ ಬಿಡುಗಡೆಯಾಗುವ ಸಾಧ್ಯತೆ ಇಲ್ಲ ಎಂದು ಮೂಲಗಳು ತಿಳಿಸಿವೆ.

ಫೇಸ್ಬುಕ್ ಪೋಸ್ಟ್ಗೆ ಸಂಬಂಧಿಸಿದಂತೆ ಕೇತಕಿ ಅವರ ವಿರುದ್ಧ ಅಂಬೇಡ್ಕರ್ ಯುವ ಸಂಘದ ಸ್ವಪ್ನಿಲ್ ಜಗತಾಪ್ ಎಂಬುವವರು 2020ರಲ್ಲಿ ನವಿ ಮುಂಬೈನ ಪೊಲೀಸರಿಗೆ ದೂರು ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.