ನವದೆಹಲಿ: ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ನಡುವೆ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಭಾರತಕ್ಕೆ ಭೇಟಿ ನೀಡಿರುವುದು ರಾಜತಾಂತ್ರಿಕವಾಗಿ ಮಹತ್ವ ಪಡೆದುಕೊಂಡಿದೆ.

ಶನಿವಾರ ಕೋಲ್ಕತ್ತಗೆ ಆಗಮಿಸುವ ಮೂಲಕ ತಮ್ಮ ನಾಲ್ಕು ದಿನಗಳ ಭಾರತ ಪ್ರವಾಸವನ್ನು ಆರಂಭಿಸಿದ್ದಾರೆ. ಇಲ್ಲಿನ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರೂಬಿಯೊ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್ ಬರಮಾಡಿಕೊಂಡರು.

ವಿಮಾನ ನಿಲ್ದಾಣದಿಂದ ನೇರವಾಗಿ ಮದರ್ ತೆರೆಸಾ ಅವರು ಸ್ಥಾಪಿಸಿದ 'ಮಿಷನರೀಸ್ ಆಫ್ ಚಾರಿಟಿ' ಸಂಸ್ಥೆಯ ಪ್ರಧಾನ ಕಚೇರಿಗೆ ಭೇಟಿ ನೀಡಿದ ರೂಬಿಯೊ ಅಲ್ಲಿನ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು.

ಮಾರ್ಕೊ ರೂಬಿಯೊ ಭೇಟಿಯ ರಾಜತಾಂತ್ರಿಕ ಅಂಶಗಳು...

* 14 ವರ್ಷಗಳ ನಂತರ ಅಮೆರಿಕದ ವಿದೇಶಾಂಗ ಕಾರ್ಯದರ್ಶಿಯೊಬ್ಬರು ಕೋಲ್ಕತ್ತಗೆ ಭೇಟಿ ನೀಡಿದ್ದಾರೆ. 2012ರ ಮೇ ತಿಂಗಳಲ್ಲಿ ಅಂದಿನ ವಿದೇಶಾಂಗ ಕಾರ್ಯದರ್ಶಿ ಹಿಲರಿ ಕ್ಲಿಂಟನ್ ಈ ನಗರಕ್ಕೆ ಭೇಟಿ ನೀಡಿದ್ದರು.

* ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗಷ್ಟೇ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆದಿದ್ದು ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ವಾರಗಳಲ್ಲಿ ಈ ಭೇಟಿ ನೀಡಿರುವುದು ರಾಜಕೀಯವಾಗಿಯೂ ಮಹತ್ವ ಪಡೆದುಕೊಂಡಿದೆ.

* ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಯಿಂದಾಗಿ ಜಾಗತಿಕವಾಗಿ ಇಂಧನ ಬಿಕ್ಕಟ್ಟು ಸೃಷ್ಟಿಯಾಗಿದ್ದು ಇರಾನ್ ತೈಲ ಸಾಗಣೆ ಮಾರ್ಗವಾದ ಹೋರ್ಮುಜ್ ಜಲಸಂಧಿಯನ್ನು ಮುಚ್ಚಿದೆ. ಇದರ ತೆರವಿನ ಬಗ್ಗೆ ಚರ್ಚೆ ನಡೆಯಲಿವೆ.

* ಈ ಇಂಧನ ಬಿಕ್ಕಟ್ಟಿನ ಪರಿಣಾಮ ಭಾರತವನ್ನು ರಷ್ಯಾದಿಂದ ತೈಲ ಖರೀದಿಸುವುದನ್ನು ದೂರವಿಡುವ ಅಮೆರಿಕದ ಪ್ರಯತ್ನಗಳಿಗೆ ಹಿನ್ನಡೆಯಾಗಿದೆ. ಈ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.

* ಭಾರತಕ್ಕೆ ಬರುವ ಮುನ್ನ ಮಾತನಾಡಿದ್ದ ಮಾರ್ಕೊ ರೂಬಿಯೊ, ಭಾರತ ನಮ್ಮ ಅತ್ಯುತ್ತಮ ಮಿತ್ರ ಹಾಗೂ ಉತ್ತಮ ಪಾಲುದಾರ ರಾಷ್ಟ್ರವಾಗಿದೆ. ಈ ಪ್ರವಾಸದಲ್ಲಿ ಇಂಧನದ ಬಗ್ಗೆಯೆ ನಮ್ಮ ಪ್ರಮುಖ ಗಮನ ಇರಲಿದೆ. ಭಾರತಕ್ಕೆ ಹೆಚ್ಚಿನ ಪ್ರಮಾಣದಲ್ಲಿ ತೈಲ ಮಾರಾಟ ಮಾಡಲು ನಾವು ಸಿದ್ಧರಿದ್ದೇವೆ. ಭಾರತ ಎಷ್ಟು ಇಂಧನ ಖರೀದಿಸಲು ಬಯಸುತ್ತದೆಯೋ, ಅಷ್ಟನ್ನೂ ಪೂರೈಸಲು ಅಮೆರಿಕ ಉತ್ಸುಕವಾಗಿದೆ ಎಂದು ಹೇಳಿದ್ದರು.

* ನವದೆಹಲಿಯಲ್ಲಿ ನಡೆಯಲಿರುವ ಕ್ವಾಡ್ ಒಕ್ಕೂಟದ ದೇಶಗಳ ಸಚಿವರೊಂದಿಗೆ ಮಾರ್ಕೊ ರೂಬಿಯೊ ಮಹತ್ವದ ಸಭೆ ನಡೆಸಲಿದ್ದು, ಭಾರತದೊಂದಿಗೆ ಪ್ರಮುಖ ಇಂಧನ ಒಪ್ಪಂದಗಳ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ.
.ಭಾರತಕ್ಕೆ ಬಂದಿಳಿದ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ.ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರೂಬಿಯೊ ಭಾರತಕ್ಕೆ ಭೇಟಿ: ತಿಳಿಯಬೇಕಾದ ಅಂಶಗಳಿವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.