ನವದೆಹಲಿ: ಕಳೆದ ಎರಡು ವರ್ಷಗಳಿಂದ ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂಬ ನಿಯಮವು ಜಾರಿಯಲ್ಲಿದ್ದು, ಈಗಿನ ಪರಿಸ್ಥಿತಿಗೆ ಅನುಗುಣವಾಗಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂಬ ನಿಯಮವನ್ನು ಸಡಿಲಗೊಳಿಸಬಹುದು. ಈಗಾಗಲೇ, ಕೆಲವು ರಾಜ್ಯಗಳು ಈ ನಿರ್ಬಂಧವನ್ನು ಕೊನೆಗೊಳಿಸಿದೆ ಎಂದು ಹಲವು ತಜ್ಞರು ಹೇಳಿದ್ದಾರೆ.

ಸದ್ಯ, ಈ ನಿಯಮವನ್ನು ಸಡಿಲಗೊಳಿಸುವುದು ಉತ್ತಮ ಉಪಾಯವಾಗಿದೆ. ಒಂದು ವೇಳೆ ಮತ್ತೊಂದು ಕೋವಿಡ್ ಅಲೆ ಬಂದರೆ, ಆಗ ಮತ್ತೊಮ್ಮೆ ಈ ನಿಯಮವನ್ನು ಜಾರಿಗೊಳಿಸಬೇಕಾಗುತ್ತದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

‘ಮಾಸ್ಕ್ ಬಳಕೆಯ ಲಾಭಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಆದರೆ, ಆ ನಿಯಮವನ್ನು ಕಡ್ಡಾಯವಾಗಿ ಜಾರಿಗೊಳಿಸುವ ಅಗತ್ಯವಿಲ್ಲ ಎಂಬುದು ನನ್ನ ಅಭಿಪ್ರಾಯ’ ಎಂದು ಹರಿಯಾಣದ ಅಶೋಕ ವಿಶ್ವವಿದ್ಯಾಲಯದ ಭೌತಶಾಸ್ತ್ರ ಮತ್ತು ಜೀವಶಾಸ್ತ್ರದ ಪ್ರಾಧ್ಯಾಪಕ ಗೌತಮ್ ಮೆನನ್ ಅವರು ಹೇಳಿದ್ದಾರೆ.

ಎರಡು ವರ್ಷಗಳಲ್ಲಿ ದೇಶದಲ್ಲಿ ಈಗ ಅತಿ ಕಡಿಮೆ ಕೋವಿಡ್ ಪ್ರಕರಣಗಳು ವರದಿಯಾಗುತ್ತಿವೆ. ಈಗಾಗಲೇ, ದೆಹಲಿ, ಮಹಾರಾಷ್ಟ್ರ, ಪಂಜಾಬ್ ಮತ್ತು ಹರಿಯಾಣದಲ್ಲಿ ಕಡ್ಡಾಯ ಮಾಸ್ಕ್ ಧರಿಸುವ ನಿಯಮವನ್ನು ರದ್ದುಗೊಳಿಸಿದೆ.

‘ಕಡ್ಡಾಯ ಮಾಸ್ಕ್ ಧಾರಣೆ ನಿಯಮಕ್ಕಿಂತ ಜನರಿಗೆ ಬೂಸ್ಟರ್ ಡೋಸ್ ನೀಡುವ ಕಾರ್ಯದತ್ತ ಹೆಚ್ಚಿನ ಗಮನವಹಿಸಬೇಕು’ ಎಂದು ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಲಕ್ಷ್ಮೀನಾರಾಯಣ್ ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.