ನವದೆಹಲಿ:ಹಣ ಅಕ್ರಮ ವರ್ಗಾವಣೆ ಸಂಬಂಧ ಜೈಲಿನಲ್ಲಿರುವ ದೆಹಲಿ ಸಚಿವ ಸತ್ಯೇಂದರ್ ಜೈನ್ ಅವರಿಗೆ ಮಸಾಜ್ ಮಾಡಿದ್ದು ಫಿಸಿಯೋಥೆರಪಿಸ್ಟ್ ಅಲ್ಲ, ಆತ ಅತ್ಯಾಚಾರ ಪ್ರಕರಣ ಸಂಬಂಧ ತಿಹಾರ್ ಜೈಲಿನಲ್ಲಿರುವ ಕೈದಿ ಎಂದು ಮೂಲಗಳು ಮಂಗಳವಾರ ತಿಳಿಸಿವೆ.

ಕಳೆದ ಐದು ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿರುವ ಸತ್ಯೇಂದರ್ ಅವರು ಜೈಲಿನಲ್ಲಿ ಮಸಾಜ್ ಮಾಡಿಸಿಕೊಂಡಿದ್ದ ವಿಡಿಯೊ ಕುರಿತು ಪ್ರತಿಕ್ರಿಯಿಸಿದ್ದ ಎಎಪಿ, ‘ಸತ್ಯೇಂದರ್ ಅವರು ಜೈಲಿನಲ್ಲಿ ಫಿಸಿಯೋಥೆರಪಿ ಚಿಕಿತ್ಸೆ ಪಡೆಯುತ್ತಿದ್ದರು’ ಎಂದು ಪ್ರತಿಪಾದಿಸಿತ್ತು. ಎಎಪಿಯ ಹೇಳಿಕೆಯ ಬೆನ್ನಲ್ಲೇ ಈ ಮಾಹಿತಿ ಹೊರಬಿದ್ದಿದೆ.

ದೆಹಲಿಯ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ, ‘ಸತ್ಯೇಂದರ್ ಅವರು ತಮ್ಮ ಬೆನ್ನು ಮೂಳೆಯ ಚಿಕಿತ್ಸೆಗಾಗಿ ಫಿಸಿಯೋಥೆರಪಿ ಚಿಕಿತ್ಸೆ ಪಡೆದಿದ್ದರು. ಆದರೆ ಬಿಜೆಪಿಯ ಸಿಸಿಟಿವಿ ದೃಶ್ಯಾವಳಿಗಳನ್ನು ಸೋರಿಕೆ ಮಾಡುವ ಮೂಲಕ ನೀಚ ರಾಜಕಾರಣ ಮಾಡುತ್ತಿದೆ’ ಎಂದು ಆರೋಪಿಸಿದ್ದರು. ಆದರೆ ಈಗ ಮೂಲಗಳಿಂದ ಲಭ್ಯವಾಗಿರುವ ಮಾಹಿತಿ ಪ್ರಕಾರ, ಸತ್ಯೇಂದರ್ ಅವರಿಗೆ ಮಸಾಜ್ ಮಾಡಿದ್ದು ರಿಂಕು ಎಂಬ ಕೈದಿ.

‘ರಿಂಕು ಅತ್ಯಾಚಾರ ಹಾಗೂ ಪೋಕ್ಸೊ ಕಾಯ್ದೆಯಡಿ ಜೈಲಿನಲ್ಲಿದ್ದಾನೆ. ಈತ ಫಿಸಿಯೋಥೆರಪಿಸ್ಟ್ ಅಲ್ಲ’ ಎಂದೂ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.