ನವದೆಹಲಿ: ‘ಕರ್ನಾಟಕದ ಕಾಂಗ್ರೆಸ್ ಸರ್ಕಾರದಲ್ಲಿ ಭಾರಿ ಭ್ರಷ್ಟಾಚಾರ ನಡೆಯುತ್ತಿದೆ’ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಆರೋಪಿಸಿದರು.

ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಚರ್ಚೆಯಲ್ಲಿ ಗುರುವಾರ ಪಾಲ್ಗೊಂಡು ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ವಿಶಾಲ ನಾಯಕತ್ವದ ಅನುಭವಗಳೊಂದಿಗೆ ದೇಶವನ್ನು ನಡೆಸಬಲ್ಲ ಅತ್ಯಂತ ಎತ್ತರದ ನಾಯಕ ಎಂದು ದೇವೇಗೌಡ ಬಣ್ಣಿಸಿದರು.

‘ಲೋಕಸಭೆಯಲ್ಲಿ ಬಿಜೆಪಿಗೆ ಸಿಕ್ಕಿರುವುದು 240 ಸ್ಥಾನಗಳಷ್ಟೇ ಎಂದು ಕಾಂಗ್ರೆಸ್ ನಾಯಕರು ಲೇವಡಿ ಮಾಡುತ್ತಿದ್ದಾರೆ. ಆದರೆ, ಕರ್ನಾಟಕ ವಿಧಾನಸಭೆಯಲ್ಲಿ ಕಾಂಗ್ರೆಸ್ 136 ಸ್ಥಾನಗಳನ್ನು ಗೆದ್ದುಕೊಂಡಿದೆ. ಕಾಂಗ್ರೆಸ್ ಸರ್ಕಾರ ಯಾವ ರೀತಿಯಲ್ಲಿ ಆಡಳಿತ ನಡೆಸುತ್ತಿದೆ ಎಂಬುದು ಎಲ್ಲರಿಗೂ ಗೊತ್ತು. ಅಲ್ಲಿರುವುದು ಕಡು ಭ್ರಷ್ಟ ಸರ್ಕಾರ’ ಎಂದು ಟೀಕಾಪ್ರಹಾರ ನಡೆಸಿದರು.

‘ಪ್ರಗತಿಶೀಲ ರಾಜ್ಯ ಕರ್ನಾಟಕವನ್ನು ಕಾಂಗ್ರೆಸ್ ಸರ್ಕಾರ ಹಾಳು ಮಾಡುತ್ತಿದೆ. ಅದು ಎಷ್ಟರ ಮಟ್ಟಿಗೆ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದರೆ ಪರಿಶಿಷ್ಟ ಜನರ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ ಹಣವನ್ನು ಚುನಾವಣೆಗೆ ಬಳಸಿಕೊಂಡಿದೆ. ಯಾವುದೇ ಅಂಜಿಕೆ ಇಲ್ಲದೆ ಭ್ರಷ್ಟಾಚಾರದಲ್ಲಿ ತೊಡಗಿರುವ ಈ ಸರ್ಕಾರದ ಕೆಟ್ಟ ಆಡಳಿತದಿಂದ ಅನೇಕ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡರು ಎಂದು ದೇವೇಗೌಡ ಗುಡುಗಿದರು. ಆಗ ಬಿಜೆಪಿ ಸದಸ್ಯರು ಶೇಮ್ ಶೇಮ್ ಎಂದು ಘೋಷಣೆಗಳನ್ನು ಕೂಗಿದರು. ದೇವೇಗೌಡರ ಹೇಳಿಕೆಗೆ ಕಾಂಗ್ರೆಸ್ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

‘ಕಾಂಗ್ರೆಸ್ ಸರ್ಕಾರದ ಸಚಿವರ ಕಾರ್ಯವೈಖರಿ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಸಲಹೆ ನೀಡಿದ್ದಾರೆ. ಈ ಕುರಿತ ಪತ್ರಿಕಾ ವರದಿಗಳನ್ನು ಓದಲೇ’ ಎಂದು ಅವರು ಪ್ರಶ್ನಿಸಿದರು. ಇದಕ್ಕೆ ಕಾಂಗ್ರೆಸ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ‘ನೀವೆಲ್ಲ ಪ್ರಾಮಾಣಿಕರು. ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿ ಕುರಿತ ಪತ್ರಿಕಾ ವರದಿಗಳನ್ನು ನಾನು ಇಲ್ಲಿ ಓದಿದರೆ ನಿಮಗೆ ಜೀರ್ಣ ಮಾಡಿಕೊಳ್ಳಲು ಕಷ್ಟ ಆಗುತ್ತದೆ’ ಎಂದು ಅವರು ವ್ಯಂಗ್ಯವಾಗಿ ಹೇಳಿದರು. ದೇವೇಗೌಡರ ಮಾತಿಗೆ ಕಾಂಗ್ರೆಸ್ ಸದಸ್ಯರು ಅಡ್ಡಿಪಡಿಸಿದರು.

‘ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ನಗರದ ಜನಸಂಖ್ಯೆ 1.45 ಕೋಟಿ ದಾಟಿದೆ. ನಗರಕ್ಕೆ ಕಾವೇರಿ ನ್ಯಾಯಮಂಡಳಿಯು 20 ಟಿಎಂಸಿ ಅಡಿ ನೀರು ಹಂಚಿಕೆ ಮಾಡಿದೆ. ಈ ನೀರು ಏನೇನೂ ಸಾಲದು. ಕನಿಷ್ಠ 50 ಟಿಎಂಸಿ ಅಡಿ ನೀರು ಹಂಚಿಕೆ ಮಾಡಬೇಕು. ಬೆಂಗಳೂರಿನ ನೀರಿನ ಸಮಸ್ಯೆ ಬಗೆಹರಿಸಲು ಆಗಿನ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಮನವಿ ಮಾಡಿದ್ದೆ. ಆಗ ಖರ್ಗೆ ಸಚಿವರಾಗಿದ್ದರು. ಸಿಂಗ್ ಅವರು ಬೇಡಿಕೆ ಈಡೇರಿಸದೆ ಕೈ ಚೆಲ್ಲಿದ್ದರು. ಆದರೆ, ಬೆಂಗಳೂರಿನ ನೀರಿನ ಸಮಸ್ಯೆ ಬಗೆಹರಿಸಲು ಮೋದಿ ಅವರಿಂದ ಸಾಧ್ಯ’ ಎಂದು ಅವರು ಪ್ರತಿಪಾದಿಸಿದರು.
.ಪ್ರಧಾನಿ ಮೋದಿ ದೇಶವನ್ನು ಮುನ್ನಡೆಸಬಲ್ಲ ‘ಅತ್ಯುತ್ತಮ’ ನಾಯಕ: ದೇವೇಗೌಡ ಗುಣಗಾನ.ಅರ್ಥಿಕತೆ ಸರಿದಾರಿಗೆ ತಂದಿದ್ದ ಮನಮೋಹನ ಸಿಂಗ್: ಎಚ್.ಡಿ. ದೇವೇಗೌಡ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.