ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದೆಹಲಿ ನೇತ್ರಾಲಯದಲ್ಲಿ ಭಾರಿ ಅಗ್ನಿ ಅವಘಡ

Published 5 ಜೂನ್ 2024, 12:40 IST
Last Updated 5 ಜೂನ್ 2024, 12:40 IST
ಅಕ್ಷರ ಗಾತ್ರ

ನವದೆಹಲಿ: ಆಗ್ನೇಯ ದೆಹಲಿಯಲ್ಲಿನ ನೇತ್ರ ಚಿಕಿತ್ಸಾಲಯವೊಂದರಲ್ಲಿ ಬುಧವಾರ ಭಾರಿ ಪ್ರಮಾಣದ ಅಗ್ನಿ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ನೇತ್ರಾಲಯದ ನೆಲಮಹಡಿಯಲ್ಲಿ ಅಳವಡಿಸಿದ್ದ ಹವಾ ನಿಯಂತ್ರಣ ಉಪಕರಣ(ಎ.ಸಿ)ಯಲ್ಲಿ ಶಾರ್ಟ್‌ ಸರ್ಕ್ಯೂಟ್‌ ಆಗಿ, ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ. ಈ ವೇಳೆ ನೇತ್ರಾಲಯದ ಪಕ್ಕದ ಕಟ್ಟಡದ 3ನೇ ಮಹಡಿಯಲ್ಲಿದ್ದ ಹೋಟೆಲ್‌ಗೂ ಬೆಂಕಿ ವ್ಯಾಪಿಸಿದೆ. ಆದಾಗ್ಯೂ, ಒಟ್ಟಾರೆ ಘಟನೆಯಲ್ಲಿ ಯಾವುದೇ ಅಪಾಯಗಳು ಸಂಭವಿಸಿಲ್ಲ’ ಎಂದು ದೆಹಲಿ ಅಗ್ನಿಶಾಮಕ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬೆಳಿಗ್ಗೆ 11.30ರ ಸುಮಾರಿಗೆ ರಿಂಗ್‌ ರಸ್ತೆಯಲ್ಲಿರುವ ಐ7 ಚೌಧರಿ ನೇತ್ರಾಲಯದಲ್ಲಿ ಅಗ್ನಿ ಅನಾಹುತ ಸಂಭವಿಸಿರುವ ಬಗ್ಗೆ ಅಗ್ನಿಶಾಮಕ ದಳಕ್ಕೆ ಕರೆ ಬಂದಿತ್ತು. ತಕ್ಷಣವೇ ಅಗ್ನಿಶಾಮಕ ದಳದ 12 ತುಕಡಿಗಳು ಸ್ಥಳಕ್ಕೆ ಧಾವಿಸಿ, ಕಾರ್ಯಾಚರಣೆ ಆರಂಭಿಸಿದ್ದರು. ಬಳಿಕ ಹೆಚ್ಚುವರಿ 8 ತಂಡಗಳು ತೆರಳಿ, ಮಧ್ಯಾಹ್ನ 1.30ರ ಸುಮಾರಿಗೆ ಬೆಂಕಿಯನ್ನು ನಂದಿಸಿದ್ದಾರೆ. ನೇತ್ರಾಲಯಲ್ಲಿದ್ದ ಎಲ್ಲ ಪೀಠೋಪಕರಣ ಹಾಗೂ ಯಂತ್ರೋಪಕರಣ ಸುಟ್ಟು ಕರಕಲಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT