ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೌರಾದ ಗೋಡೌನ್‌ನಲ್ಲಿ ಅಗ್ನಿ ಅವಘಡ

Published 14 ಅಕ್ಟೋಬರ್ 2023, 7:20 IST
Last Updated 14 ಅಕ್ಟೋಬರ್ 2023, 7:20 IST
ಅಕ್ಷರ ಗಾತ್ರ

ಹೌರಾ: ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ಗೋಡೌನ್‌ನಲ್ಲಿ ಶನಿವಾರ (ಅಕ್ಟೋಬರ್‌ 14) ಬೆಳಗ್ಗೆ ಭಾರಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಕ್ರೈಲ್ ಪೊಲೀಸ್ ಠಾಣಾ ವ್ಯಾಪ್ತಿಯ ಭಾಗಬತಿಪುರದಲ್ಲಿರುವ ಸ್ವದೇಶಿ ಎಫ್‌ಎಂಸಿಜಿ ತಯಾರಕ ಇಮಾಮಿಯ ಗೋಡೌನ್‌ನಲ್ಲಿ ಬೆಳಿಗ್ಗೆ 6:30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಅವರು ತಿಳಿಸಿದ್ದಾರೆ.

11 ಅಗ್ನಿಶಾಮಕ ವಾಹನಗಳು ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಶ್ರಮಿಸುತ್ತಿವೆ. ಅವಘಡಕ್ಕೆ ನಿಖರ ‌ಕಾರಣ ತಿಳಿದುಬಂದಿಲ್ಲ. ಘಟನೆಯಲ್ಲಿ ಗಾಯಗಳಾಗಿರುವ ವರದಿಗಳಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT