ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಹಿಮಾಚಲ ಪ್ರದೇಶ: ಭೂಕುಸಿತದಿಂದ ಧರೆಗುರುಳಿದ ಬಹುಮಹಡಿ ಕಟ್ಟಡಗಳು

Published 24 ಆಗಸ್ಟ್ 2023, 5:48 IST
Last Updated 24 ಆಗಸ್ಟ್ 2023, 5:48 IST
ಅಕ್ಷರ ಗಾತ್ರ

ಹಿಮಾಚಲ ಪ್ರದೇಶ: ಹಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಹಿಮಾಚಲ ಪ್ರದೇಶದಲ್ಲಿ ಮಳೆ ಸಂಬಂಧಿ ಅವಘಡಗಳು, ಪ್ರಾಣ ಹಾನಿ ವರದಿಯಾಗುತ್ತಲೇ ಇವೆ.  

ಹಿಮಾಚಲ ಪ್ರದೇಶದ ಕುಲ್ಲುವಿನ ಅನ್ನಿ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಅನೇಕ ಮನೆಗಳು ಏಕಾಏಕಿ ನೆಲಸಮವಾಗಿವೆ. ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆಯಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಹುಮಹಡಿ ಕಟ್ಟಡಗಳು ನೆಲಕ್ಕುರುಳುವ ದೃಶ್ಯಗಳ ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ.

ಇಂದಿನಿಂದ ಎರಡು ದಿನಗಳ ಕಾಲ ಭಾರತೀಯ ಹವಾಮಾನ ಇಲಾಖೆ ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್‌ ಘೋಷಣೆ ಮಾಡಿದೆ.

ಭೂಕುಸಿತ, ಪ್ರವಾಹ ಪರಿಸ್ಥಿತಿಯಿಂದ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಮಂಡಿ– ಕುಲ್ಲು ರಾಷ್ಟ್ರೀಯ ಹೆದ್ದಾರಿಯಲ್ಲಿ ನೂರಾರು ವಾಹನಗಳು ಸಿಲುಕಿದ್ದು ರಕ್ಷಣಾ ತಂಡ ಕಾರ್ಯಾಚರಣೆ ನಡೆಸುತ್ತಿದೆ.  

ಇಡೀ ರಾಜ್ಯವನ್ನೂ ನೈಸರ್ಗಿಕ ವಿಕೋಪ ಪೀಡಿತ ಪ್ರದೇಶ ಎಂದು ಸರ್ಕಾರ ಘೋಷಣೆ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT