ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರಿ ಮಳೆಗೆ ಕುಸಿದ ದೆಹಲಿ–ಮುಂಬೈ ರಸ್ತೆಗಳು: ಹರಿದಾಡುತ್ತಿವೆ ಕಂದಕದ ಚಿತ್ರಗಳು

Published 5 ಜುಲೈ 2023, 10:36 IST
Last Updated 5 ಜುಲೈ 2023, 10:36 IST
ಅಕ್ಷರ ಗಾತ್ರ

ಭಾರಿ ಮಳೆಯ ಪರಿಣಾಮವಾಗಿ ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಮುಂಬೈನ ರಸ್ತೆಗಳಲ್ಲಿ ದೊಡ್ಡ ದೊಡ್ಡ ಕಂದಕಗಳು ಸೃಷ್ಟಿಯಾಗಿವೆ. ಇದಕ್ಕೆ ಸಂಬಂಧಿಸಿದ ಚಿತ್ರ ಹಾಗೂ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

ದೆಹಲಿಯ ಜನಕಪುರಿ ಪ್ರದೇಶದ ರಸ್ತೆಯಲ್ಲಿ ಮಂಗಳವಾರ ಹಾಗೂ ಮುಂಬೈನ ಛುನಭಟ್ಟಿ ರಸ್ತೆಯಲ್ಲಿ ಇಂದು (ಬುಧವಾರ) ಬೆಳಗ್ಗೆ ರಸ್ತೆ ಕುಸಿದಿವೆ.

ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ದೆಹಲಿಯಲ್ಲಿ ಪೊಲೀಸರು ಮುನ್ನೆಚ್ಚರಿಕೆಯಾಗಿ ಬ್ಯಾರಿಕೇಡ್‌ಗಳನ್ನು ಅಳವಡಿಸಿದ್ದಾರೆ.

ಮುಂಬೈನಲ್ಲಿ, ರಸ್ತೆ ಮೇಲೆ ನಿಲ್ಲಿಸಿದ್ದ ಹಲವು ವಾಹನಗಳು ಕಂದಕಕ್ಕೆ ಉರುಳಿವೆ. ಅಗ್ನಿಶಾಮಕ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಧಾವಿಸಿ, ಕಾರ್ಯಾಚರಣೆ ಕೈಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT