ಗುವಾಹಟಿ: ಐಐಟಿ ಗುವಾಹಟಿಯ ಗಣಿತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರೊಬ್ಬರ ಮೃತದೇಹ ಮನೆಯೊಳಗೆ ಫ್ಯಾನ್ಗೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಸಮೀರ್ ಕಮಲ್ (47) ಮೃತಪಟ್ಟವರು. ‘ಸಮೀರ್ ಅವರ ಮನೆಯಿಂದ ದುರ್ವಾಸನೆ ಬರುತ್ತಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದು,ಮನೆಯ ಬಾಗಿಲು ಮುರಿದು ಒಳ ಪ್ರವೇಶಿಸಿದಾಗ ಕೊಠಡಿಯೊಳಗೆ ಮೃತದೇಹ ಪತ್ತೆಯಾಗಿದೆ’ ಎಂದು ಪೊಲೀಸರು ವಿವರಿಸಿದ್ದಾರೆ.

ನವದೆಹಲಿ ನಿವಾಸಿ ಸಮೀರ್ ಅವರು ಅವಿವಾಹಿತರಾಗಿದ್ದರು ಎಂದೂ ತಿಳಿಸಿದ್ದಾರೆ.

‘ಸಮೀರ್ ಅವರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಸಲಾಗುವುದು’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.