ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಸ್‌ಪಿ ಸಂಸ್ಥಾಪಕ ಕಾನ್ಶಿರಾಮ್‌ಗೆ ಭಾರತರತ್ನ ನೀಡುವಂತೆ ಮಾಯಾವತಿ ಒತ್ತಾಯ

Published 24 ಜನವರಿ 2024, 11:39 IST
Last Updated 24 ಜನವರಿ 2024, 11:39 IST
ಅಕ್ಷರ ಗಾತ್ರ

ಲಖನೌ: ಬಹುಜನ ಸಮಾಜವಾದಿ ಪಕ್ಷ (ಬಿಎಸ್‌ಪಿ) ಸಂಸ್ಥಾಪಕ ಕಾನ್ಶಿರಾಮ್‌ ಅವರಿಗೆ ಭಾರತ ರತ್ನ ನೀಡುವಂತೆ ಬಿಎಸ್‌ಪಿ ನಾಯಕಿ ಮಾಯಾವತಿ ಒತ್ತಾಯಿಸಿದ್ದಾರೆ.

ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರಿಗೆ ಭಾರತ ರತ್ನ(ಮರಣೋತ್ತರ) ಪ್ರಶಸ್ತಿ ನೀಡಿ ಗೌರವಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿರುವ ಅವರು ಕಾನ್ಶಿರಾಮ್‌ ಅವರಿಗೂ ಈ ಗೌರವ ಸಲ್ಲಬೇಕಿದೆ ಎಂದಿದ್ದಾರೆ.

ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ‘ದೇಶದ ಅತ್ಯಂತ ಹಿಂದುಳಿದ ವರ್ಗಗಳ ಸಾಂವಿಧಾನಿಕ ಹಕ್ಕು, ಸಾಮಾಜಿಕ ನ್ಯಾಯ ಮತ್ತು ಸಮಾನತೆಗಾಗಿ ತಮ್ಮ ಜೀವನದುದ್ದಕ್ಕೂ ಹೋರಾಡಿದ ಮಹಾನ್ ನಾಯಕ ಕರ್ಪೂರಿ ಅವರಿಗೆ ಅವರ ಜನ್ಮ ಶತಮಾನೋತ್ಸವ ದಿನವಾದ ಇಂದು ಗೌರವವನ್ನು ಸಲ್ಲಿಸುತ್ತೇನೆ’ ಎಂದರು.

‘ದಲಿತರು ಮತ್ತು ಇತರ ನಿರ್ಲಕ್ಷಿತ ಜನರು ಸ್ವಾಭಿಮಾನದಿಂದ ಬದುಕಲು ಸಹಾಯ ಮಾಡುವ ಮೂಲಕ ಅವರ ಸಬಲೀಕರಣಕ್ಕೆ ದುಡಿದ ಕಾನ್ಶಿರಾಮ್‌ ಅವರ ಕೊಡುಗೆ ಅವಿಸ್ಮರಣೀಯ. ಅವರಿಗೂ ಭಾರತ ರತ್ನ ನೀಡಿ ಗೌರವಿಸಬೇಕೆಂಬುವುದು ಕೋಟ್ಯಂತರ ಜನರ ಆಶಯವಾಗಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT