ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇರೆ ಪಕ್ಷಗಳೊಂದಿಗೆ ಮೈತ್ರಿ ಇಲ್ಲ: ಮಾಯಾವತಿ

Last Updated 15 ಜನವರಿ 2023, 13:16 IST
ಅಕ್ಷರ ಗಾತ್ರ

ಲಖನೌ (ಪಿಟಿಐ): ವಿವಿಧ ರಾಜ್ಯಗಳ ವಿಧಾನಸಭೆ ಮತ್ತು 2024ರ ಲೋಕಸಭಾ ಚುನಾವಣೆಗಳಲ್ಲಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಬಿಎಸ್‌ಪಿ ನಾಯಕಿ ಮಾಯಾವತಿ ಅವರು ಸ್ಪಷ್ಟಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕರ್ನಾಟಕ, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ ಮತ್ತು ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್‌ಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆ’ ಎಂದು ಹೇಳಿದರು.

ಇದೇ ವೇಳೆ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರದ ಬದಲಿಗೆ ಬ್ಯಾಲೆಟ್‌ ಪೇಪರ್‌ ಬಳಸಬೇಕು ಎಂದು ಒತ್ತಾಯಿಸಿದರು.

1984, ಏಪ್ರಿಲ್‌ 14ರಂದು ಬಹುಜನ ಸಮಾಜವಾದಿ ಪಕ್ಷವನ್ನು ಸ್ಥಾಪಿಸಲಾಯಿತು. ಬ್ಯಾಲೆಟ್‌ ಪೇಪರ್‌ ಬಳಕೆ ಮಾಡುತ್ತಿದ್ದ ಅವಧಿಯಲ್ಲಿ ಪಕ್ಷದ ಶೇಕಡಾವಾರು ಮತವಾಗಲೀ, ಬೆಂಬಲವಾಗಲಿ ಇಳಿಕೆಯಾಗಿರಲಿಲ್ಲ. ಆದರೆ ಚುನಾವಣೆಗಳಲ್ಲಿ ಇವಿಎಂ ಬಳಕೆಯು ನಮ್ಮ ಶೇಕಡವಾರು ಮತಗಳ ಮೇಲೆ ಪರಿಣಾಮ ಬೀರಿದೆ ಮತ್ತು ಇವಿಎಂನಲ್ಲಿ ಕೆಲವು ಲೋಪಗಳಿವೆ ಎಂದು ಅವರು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT