ಡೆಹ್ರಾಡೂನ್: ಮುಂಬರುವ ಶೈಕ್ಷಣಿಕ ವರ್ಷದಿಂದ ಉತ್ತರಾಖಂಡದಲ್ಲಿ ವೈದ್ಯಕೀಯ ಶಿಕ್ಷಣವನ್ನು ಇಂಗ್ಲಿಷ್ ಜೊತೆಗೆ ಹಿಂದಿಯಲ್ಲೂ ಬೋಧಿಸಲಾಗುವುದು ಎಂದು ಅಲ್ಲಿನ ವೈದ್ಯಕೀಯ ಶಿಕ್ಷಣ ಸಚಿವ ಧನ್ ಸಿಂಗ್ ರಾವತ್ ಹೇಳಿದ್ದಾರೆ.

ಕೇಂದ್ರ ಸರ್ಕಾರವು ಹಿಂದಿ ಭಾಷೆಗೆ ವಿಶೇಷ ಪ್ರಾಮುಖ್ಯತೆ ನೀಡುತ್ತಿರುವ ಹಿನ್ನೆಲೆ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ರಾವತ್ ಶುಕ್ರವಾರ ಹೇಳಿದ್ದಾರೆ.

ಈ ಮೂಲಕ ಉತ್ತರಾಖಂಡವು ವೈದ್ಯಕೀಯ ಶಿಕ್ಷಣವನ್ನು ಹಿಂದಿಯಲ್ಲಿ ಅಳವಡಿಸುತ್ತಿರುವ ಎರಡನೇ ರಾಜ್ಯ ಎಂದೆನಿಸಿಕೊಳ್ಳಲಿದೆ. ಮಧ್ಯ ಪ್ರದೇಶದಲ್ಲಿ ಮೊದಲ ಬಾರಿಗೆ ವೈದ್ಯಕೀಯ ಶಿಕ್ಷಣವನ್ನು ಹಿಂದಿಯಲ್ಲಿ ಅಳವಡಿಸಿಕೊಂಡಿತು.

ಇದಕ್ಕಾಗಿ ರಾಜ್ಯ ವೈದ್ಯಕೀಯ ಶಿಕ್ಷಣ ಇಲಾಖೆಯು ನಾಲ್ವರು ತಜ್ಞರನ್ನು ಒಳಗೊಂಡ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯು ಮಧ್ಯ ಪ್ರದೇಶದ ಸರ್ಕಾರಿ ಕಾಲೇಜುಗಳ ಎಂಬಿಬಿಎಸ್ ಹಿಂದಿ ಪಠ್ಯಗಳನ್ನು ಅಭ್ಯಸಿಸಿ, ಬಳಿಕ ಉತ್ತರಾಖಂಡದ ಎಂಬಿಬಿಎಸ್ ಹಿಂದಿ ಹೊಸ ಪಠ್ಯ ರಚನೆಯ ಡ್ರಾಫ್ಟ್‌ಅನ್ನು ತಯಾರಿಸಲಿದೆ ಎಂದು ರಾವತ್ ತಿಳಿಸಿದ್ದಾರೆ.

ಅಕ್ಟೋಬರ್ 16ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಎಂಬಿಬಿಎಸ್‌ನ ಮೂರು ಹಿಂದಿ ವಿಷಯಗಳ ಪಠ್ಯ ಪುಸ್ತಕಗಳನ್ನು ಬಿಡುಗಡೆ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.