ಮುಂಬೈ (ಪಿಟಿಐ): ಮದ್ಯದ ಅಮಲಿನಲ್ಲಿದ್ದ ಮೂವರು ಸ್ನೇಹಿತರು ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬರಿಗೆ ಮತ್ತು ಬರುವ ಪಾನೀಯ ನೀಡಿ ಅತ್ಯಾಚಾರ ಎಸಗಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ನಡೆದಿದೆ.

‘ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಗೆ ನ್ಯಾಯಾಲಯವು ಮೇ 27ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ’ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕರ್ನಾಟಕದ ಬೆಳಗಾವಿ ಜಿಲ್ಲೆಯವರಾದ ಸಂತ್ರಸ್ತೆಯು ಮೇ 18ರಂದು ತನ್ನ ಕಾಲೇಜು ಸ್ನೇಹಿತನೊಂದಿಗೆ ಸಿನಿಮಾಗೆ ಹೋಗುವುದೆಂದು ನಿರ್ಧರಿಸಿದ್ದರು. ಸಿನಿಮಾಗೆ ಹೋಗುವ ಮೊದಲು ಸ್ನೇಹಿತ ಅವರನ್ನು ಫ್ಲ್ಯಾಟ್ಗೆ ಕರೆದುಕೊಂಡು ಹೋಗಿದ್ದ. ಮದ್ಯದ ಅಮಲಿನಲ್ಲಿದ್ದ ಸ್ನೇಹಿತ ಸಂತ್ರಸ್ತೆಗೂ ಮತ್ತು ಬರುವ ಪಾನೀಯ ಕುಡಿಸಿದ್ದ. ಅವರು ಪ್ರಜ್ಞಾಹೀನರಾದ ಬಳಿಕ ಇನ್ನಿಬ್ಬರು ಸ್ನೇಹಿತರೂ ಸೇರಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಬೇರೆಯವರಿಗೆ ತಿಳಿಸದಂತೆ ಬೆದರಿಕೆ ಒಡ್ಡಿದ್ದರು. ಆದರೆ ಸಂತ್ರಸ್ತೆ ತಮ್ಮ ಪೋಷಕರಿಗೆ ಈ ಬಗ್ಗೆ ತಿಳಿಸಿದ್ದರು. ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.