ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್‌ ಯುದ್ಧ ವಿಮಾನವನ್ನು ಹೊಡೆದುರುಳಿಸಲಾಗಿದೆ: ಭಾರತ

Last Updated 27 ಫೆಬ್ರುವರಿ 2019, 14:48 IST
ಅಕ್ಷರ ಗಾತ್ರ

ನವದೆಹಲಿ: ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತೀಯ ವಾಯುಪಡೆ ವಿಫಲಗೊಳಿಸಿದ್ದು ಅವರ ಒಂದು ಯುದ್ಧ ವಿಮಾನವನ್ನು ಹೊಡೆದುರುಳಿಸಿರುವುದಾಗಿ ವಿದೇಶಾಂಗ ಇಲಾಖೆ ಬುಧವಾರ ತಿಳಿಸಿದೆ.

ಭಾರತ ಮತ್ತು ಪಾಕಿಸ್ತಾನ ನಡುವೆ ಬಿಗುವಿನ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ವಿದೇಶಾಂಗ ಸಚಿವಾಲಯದ ವಕ್ತಾರರುಸುದ್ದಿ ಗೋಷ್ಠಿ ನಡೆಸಿ ಮಾಹಿತಿ ನೀಡಿದರು.

ಭಾರತದ ವಾಯು ಗಡಿಯೊಳಗೆ ಪ್ರವೇಶಿಸಿದ್ದ ಪಾಕ್‌ ಯುದ್ಧ ವಿಮಾನವನ್ನು ಹೊಡೆದುರುಳಿಸಲಾಗಿದೆ. ನಮ್ಮ ಮಿಗ್‌–21ಯುದ್ಧ ವಿಮಾನ ಪತನವಾಗಿದ್ದು ಪೈಲೆಟ್‌ ನಾಪತ್ತೆಯಾಗಿದ್ದಾನೆ ಎಂದು ವಿದೇಶಾಂಗ ಇಲಾಖೆಯ ವಕ್ತಾರರು ತಿಳಿಸಿದ್ದಾರೆ.

ನಾಪತ್ತೆಯಾಗಿರುವ ಭಾರತದ ಫೈಲಟ್‌ ಪಾಕಿಸ್ತಾನದ ವಶದಲ್ಲಿರವುದಾಗಿ ಪಾಕ್ ಹೇಳಿ ಕೊಂಡಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT