ನವದೆಹಲಿ: ದೇಶದಲ್ಲಿ ಇ-ಫಾರ್ಮಸಿ ಹಾಗೂ ಆನ್ಲೈನ್ ಮೂಲಕ ಔಷಧ ಮಾರಾಟ ನಿಲ್ಲಿಸುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ದೇಶದಾದ್ಯಂತ ಇಂದು (ಮೇ 20) ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘ ಬಂದ್ಗೆ ಕರೆ ನೀಡಿದೆ.

40 ಸಾವಿರಕ್ಕೂ ಹೆಚ್ಚು ಔಷಧ ಅಂಗಡಿಗಳು ಬಂದ್

ಆಂಧ್ರಪ್ರದೇಶದಾದ್ಯಂತ ಸುಮಾರು 40 ಸಾವಿರಕ್ಕೂ ಹೆಚ್ಚು ಔಷಧ ಅಂಗಡಿಗಳು ಒಂದು ದಿನದ ಮಟ್ಟಿಗೆ ಬಂದ್ ಆಗಲಿವೆ. ದೇಶದ 12.4 ಲಕ್ಷಕ್ಕೂ ಹೆಚ್ಚು ಔಷಧಿ ವಿತರಕರನ್ನು ಪ್ರತಿನಿಧಿಸುವ ‘ಅಖಿಲ ಭಾರತ ಕೆಮಿಸ್ಟ್ ಮತ್ತು ಡ್ರಗ್ಗಿಸ್ಟ್ ಸಂಘಟನೆ’ ಕರೆ ನೀಡಿರುವ ದೇಶವ್ಯಾಪಿ ಮುಷ್ಕರಕ್ಕೆ ಬೆಂಬಲ ಸೂಚಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಆಂಧ್ರಪ್ರದೇಶ ಕೆಮಿಸ್ಟ್ ಮತ್ತು ಡ್ರಗ್ಗಿಸ್ಟ್ ಅಸೋಸಿಯೇಷನ್ ಅಧ್ಯಕ್ಷ ಪಿ.ವಿ. ರತ್ನಂ, ಬುಧವಾರ ರಾಜ್ಯದಾದ್ಯಂತ ಪ್ರತಿಭಟನೆ ಮತ್ತು ಪ್ರದರ್ಶನಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಇತ್ತ ಮೈಸೂರಿನಲ್ಲೂ ಅನಿಯಂತ್ರಿತ ಆನ್ಲೈನ್ ಔಷಧ ಮಾರಾಟ, ಇ– ಫಾರ್ಮಸಿಗಳ ಭಾರಿ ರಿಯಾಯಿತಿ ಪದ್ಧತಿ ವಿರೋಧಿಸಿ ಅಖಿಲ ಭಾರತ ಕೆಮಿಸ್ಟ್ ಮತ್ತು ಡ್ರಗ್ಗಿಸ್ಟ್ ಸಂಸ್ಥೆ ಕರೆ ನೀಡಿರುವ ಬಂದ್ಗೆ ಜಿಲ್ಲಾ ಔಷಧಿ ವ್ಯಾಪಾರಿಗಳ ಕ್ಷೇಮಾಭಿವೃದ್ಧಿ ಸಂಘ ಸಂಪೂರ್ಣ ಬೆಂಬಲ ನೀಡಿದೆ.

‘ಬಂದ್ನಿಂದ ಜಿಲ್ಲೆಯಲ್ಲಿ ಚಿಲ್ಲರೆ ಔಷಧ ಪೂರೈಕೆಗೆ ಅಡ್ಡಿಯಾಗಬಹುದು. ಸಾರ್ವಜನಿಕರ ಅನುಕೂಲಕ್ಕೆ ಹಲವು ಪ್ರದೇಶಗಳಲ್ಲಿ ತುರ್ತು ಔಷಧ ಮತ್ತು ಅಗತ್ಯ ವೈದ್ಯಕೀಯ ಸೇವೆಗಳು ಲಭ್ಯವಿರುತ್ತದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಮುಖ ಬೇಡಿಕೆಗಳು:

ಇ-ಫಾರ್ಮಸಿ ಕಾರ್ಯಾಚರಣೆಗೆ ಅನುಮತಿ ನೀಡುವ 2018ರ ಜಿಎಸ್ಆರ್ 817 (ಇ) ಅಧಿಸೂಚನೆಯನ್ನು ತಕ್ಷಣವೇ ಹಿಂಪಡೆಯಬೇಕು.

ಕೋವಿಡ್-19 ಅವಧಿಯಲ್ಲಿ ಮನೆಬಾಗಿಲಿಗೆ ಔಷಧಿ ತಲುಪಿಸಲು ಅನುಮತಿ ನೀಡಿದ್ದ ಜಿಎಸ್ಆರ್ 220 (ಇ) ಆದೇಶವನ್ನು ರದ್ದುಗೊಳಿಸಬೇಕು.

ಕಾರ್ಪೊರೇಟ್ ಸಂಸ್ಥೆಗಳ ಭಾರಿ ರಿಯಾಯಿತಿ ದರ ಸಮರಕ್ಕೆ ಬ್ರೇಕ್ ಹಾಕಿ, ಎಲ್ಲ ವ್ಯಾಪಾರಿಗಳಿಗೂ ಸಮಾನ ಮುಕ್ತ ಮಾರುಕಟ್ಟೆ ಕಲ್ಪಿಸಬೇಕು.

ನಮ್ಮ ಬೇಡಿಕೆಗಳಿಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ, ಮುಂದಿನ ದಿನಗಳಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಹೂಡಲು ಹಿಂಜರಿಯುವುದಿಲ್ಲ ಎಂದು ಅಧ್ಯಕ್ಷ ಪಿ.ವಿ. ರತ್ನಂ ಎಚ್ಚರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.