ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಿ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಆರೋಪಿಗಳ ವೈದ್ಯಕೀಯ ಪರೀಕ್ಷೆ

Published 12 ಏಪ್ರಿಲ್ 2024, 11:35 IST
Last Updated 12 ಏಪ್ರಿಲ್ 2024, 11:35 IST
ಅಕ್ಷರ ಗಾತ್ರ

ಕೋಲ್ಕತ್ತಾ: ಬೆಂಗಳೂರಿನ ದಿ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಸಂಬಂಧ ಇಂದು ಬಂಧಿಸಲಾದ ಇಬ್ಬರು ಆರೋಪಿಗಳನ್ನು ಇಲ್ಲಿನ ಮೆಟ್ರೋಪಾಲಿಟನ್ ನ್ಯಾಯಾಲಯದಲ್ಲಿ ಹಾಜರುಪಡಿಸುವ ಮೊದಲು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು.

ಆರೋಪಿಗಳನ್ನು ಟ್ರಾನ್ಸಿಟ್ ರಿಮಾಂಡ್‌ಗಾಗಿ ಬ್ಯಾಂಕ್‌ಶಾಲ ನ್ಯಾಯಾಲಯಕ್ಕೆ ಕರೆದೊಯ್ಯಲಾಯಿತು ಎಂದು ಎನ್‌ಐಎ ಪರ ವಕೀಲರು ತಿಳಿಸಿದ್ದಾರೆ.

ಸ್ಫೋಟದ ಪ್ರಮುಖ ‌ಶಂಕಿತರಾದ ಮುಸಾವೀರ್ ಹುಸೇನ್ ಶಾಜೀಬ್ ಹಾಗೂ ಅಬ್ದುಲ್ ಮಥೀನ್ ತಾಹಾನನ್ನು ವೈದ್ಯಕೀಯ ತಪಾಸಣೆಗಾಗಿ ಬಿಧಾನ ನಗರ ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಪ್ರಮುಖ ‌ಶಂಕಿತರಾದ ಮುಸಾವೀರ್ ಹುಸೇನ್ ಶಾಜೀಬ್ ಹಾಗೂ ಅಬ್ದುಲ್ ಮಥೀನ್ ತಾಹಾನನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಗಿದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಇಂದು ಬೆಳಿಗ್ಗೆ ತಿಳಿಸಿದೆ.

ಆರೋಪಿಗಳು ಪಶ್ಚಿಮ ಬಂಗಾಳಕ್ಕೆ‌ ಹೋಗಿದ್ದ ಬಗ್ಗೆ ಮಾಹಿತಿ ಪಡೆದಿದ್ದ ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೇಂದ್ರ ಗುಪ್ತಚರ ಸಂಸ್ಥೆ ಜಂಟಿ ಕಾರ್ಯಾಚರಣೆಯಲ್ಲಿ ಶಂಕಿತರನ್ನು ಬಂಧಿಸಿವೆ ಎಂದು ಮೇದಿನಿಪುರ ಎಸ್‌ಪಿ ಸೌಮ್ಯದೀಪ್ ಭಟ್ಟಾಚಾರ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT