ಶುಕ್ರವಾರ, 29 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ | ವೈದ್ಯಕೀಯ ಪರೀಕ್ಷೆ, ಚಿಕಿತ್ಸೆ ಉಚಿತ: ಆ. 15ರಿಂದ ಯೋಜನೆ ಜಾರಿ

Published 4 ಆಗಸ್ಟ್ 2023, 6:05 IST
Last Updated 4 ಆಗಸ್ಟ್ 2023, 6:05 IST
ಅಕ್ಷರ ಗಾತ್ರ

ಮುಂಬೈ: ಸಾರ್ವಜನಿಕ ಆಸ್ಪತ್ರೆಗಳಲ್ಲಿ ಉಚಿತ ವೈದ್ಯಕೀಯ ಪರೀಕ್ಷೆ ಮತ್ತು ಚಿಕಿತ್ಸೆಯನ್ನು ಒದಗಿಸಲು ಮುಖ್ಯಮಂತ್ರಿ ಏಕನಾಥ ಶಿಂದೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ.

ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ‘ಆರೋಗ್ಯ ಹಕ್ಕು ನೀತಿ’ಗೆ ಒಪ್ಪಿಗೆ ಸೂಚಿಸಲಾಗಿದೆ.

ಈ ಯೋಜನೆ ಆಗಸ್ಟ್ 15ರಿಂದ ಜಾರಿಯಾಗುವ ಸಾಧ್ಯತೆ ಇದೆ. ರಾಜ್ಯದ 2,418 ಆಸ್ಪತ್ರೆಗಳಲ್ಲಿ ಈ ಸೌಲಭ್ಯ ಇರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಯೋಜನೆಯಡಿ 2.5 ಕೋಟಿಗೂ ಅಧಿಕ ಮಂದಿ ಚಿಕಿತ್ಸೆ ಪಡೆಯಬಹುದಾಗಿದೆ. ಆದರೆ, ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳಿಗೆ ಈ ಯೋಜನೆ ಅನ್ವಯಿಸುವುದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಗ್ರಾಮೀಣ ಆಸ್ಪತ್ರೆಗಳು, ಮಹಿಳಾ ಆಸ್ಪತ್ರೆಗಳು, ಜಿಲ್ಲಾ ಜನರಲ್ ಆಸ್ಪತ್ರೆಗಳು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಾಸಿಕ್ ಮತ್ತು ಅಮರಾವತಿಯ ಕ್ಯಾನ್ಸರ್ ಆಸ್ಪತ್ರೆಗಳು ಸಹ ಉಚಿತವಾಗಿ ಚಿಕಿತ್ಸೆ ನೀಡುತ್ತಿವೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT