ಬುಧವಾರ, 9 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೋಲ್ಕತ್ತ ಪ್ರಕರಣ: ಸಂದೀಪ್ ಘೋಷ್, ಮೊಂಡಲ್ ಕೋರ್ಟ್‌ಗೆ ಹಾಜರು

Published : 15 ಸೆಪ್ಟೆಂಬರ್ 2024, 15:53 IST
Last Updated : 15 ಸೆಪ್ಟೆಂಬರ್ 2024, 15:53 IST
ಫಾಲೋ ಮಾಡಿ
Comments

ಕೋಲ್ಕತ್ತ: ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಮತ್ತು ತಾಲಾ ಪೊಲೀಸ್ ಠಾಣೆಯ ಠಾಣಾಧಿಕಾರಿ ಅಭಿಜಿತ್ ಮೊಂಡಲ್ ಅವರನ್ನು ಸಿಬಿಐ ಅಧಿಕಾರಿಗಳು ಭಾನುವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಹಾಗೂ ಆಕೆಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇವರಿಬ್ಬರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಮೊಂಡಲ್ ಅವರನ್ನು ಸಾಕ್ಷ್ಯ ತಿರುಚಿದ ಆರೋಪದ ಅಡಿಯಲ್ಲಿ, ಎಫ್‌ಐಆರ್ ದಾಖಲಿಸಲು ವಿಳಂಬ ಮಾಡಿದ ಆರೋಪದ ಅಡಿಯಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಜನರಿಂದ ಪ್ರತಿಭಟನೆ: ಸಿಬಿಐ ಅಧಿಕಾರಿಗಳು ಮೊಂಡಲ್ ಅವರನ್ನು ವೈದ್ಯಕೀಯ ತಪಾಸಣೆಗೆ ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ಹಲವಾರು ಮಂದಿ ಸಾರ್ವಜನಿಕರು ಸಿಬಿಐ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಹತ್ಯೆಗೊಳಗಾದ ವೈದ್ಯಕೀಯ ವಿದ್ಯಾರ್ಥಿನಿಗೆ ನ್ಯಾಯ ಕೊಡಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು. ಪೊಲೀಸರು ಈ ಪ್ರಕರಣದ ವಿಚಾರದಲ್ಲಿ ನಡೆದುಕೊಂಡ ಬಗೆಯ ಕುರಿತು ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT