ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪಕುಲಪತಿಗಳ ನೇಮಕಾತಿ | ರಾಜ್ಯಪಾಲರೊಂದಿಗಿನ ಚರ್ಚೆ ಫಲಪ್ರದ: ಮಮತಾ ಬ್ಯಾನರ್ಜಿ

Published 5 ಡಿಸೆಂಬರ್ 2023, 4:16 IST
Last Updated 5 ಡಿಸೆಂಬರ್ 2023, 4:16 IST
ಅಕ್ಷರ ಗಾತ್ರ

ಕೋಲ್ಕತ್ತ: ರಾಜ್ಯದ ವಿಶ್ವವಿದ್ಯಾನಿಲಯಗಳಲ್ಲಿ ಖಾಯಂ ಉಪಕುಲಪತಿಗಳ ನೇಮಕಾತಿ ಕುರಿತು ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರೊಂದಿಗಿನ ಸಭೆ ಫಲಪ್ರದವಾಗಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಆದಾಗ್ಯೂ, ಉಪಕುಲಪತಿಗಳ ನೇಮಕಾತಿಗೆ ಸಮಿತಿಯನ್ನು ರಚಿಸುವ ಕುರಿತಂತೆ ಸುಪ್ರೀಂ ಕೋರ್ಟ್‌ನ ಆದೇಶಕ್ಕೆ ಸಂಬಂಧಿಸಿ ಚರ್ಚೆ ನಡೆದಿದೆಯೇ ಎಂಬುದಕ್ಕೆ ಮಮತಾ ಬ್ಯಾನರ್ಜಿ ಅವರಿಂದ ಉತ್ತರ ಲಭ್ಯವಾಗಿಲ್ಲ.

'ಸಭೆ ಚೆನ್ನಾಗಿ ನಡೆಯಿತು. ಚರ್ಚೆ ಫಲಪ್ರದವಾಗಿದೆ' ಎಂದು ಸೋಮವಾರ ಸಭೆ ರಾಜಭವನದಲ್ಲಿ ಸುಮಾರು ಒಂದು ತಾಸಿನವರೆಗೂ ನಡೆದ ಸಭೆಯ ಬಳಿಕ ಮಮತಾ ಬ್ಯಾನರ್ಜಿ ತಿಳಿಸಿದರು.

ಯಾವುದೇ ಟೀಕೆ, ಸಂಘರ್ಷಗಳು ಇರಬಾರದು. ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಭಿನ್ನಮತವಿದೆ ಎಂದು ಹಲವರು ಹೇಳುತ್ತಾರೆ. ಆದರೆ ಇದು ಸತ್ಯವಲ್ಲ ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ವಿಶ್ವವಿದ್ಯಾಲಯಗಳಲ್ಲಿ ಉಪಕುಲಪತಿಗಳ ನೇಮಕ ಸೇರಿದಂತೆ ಹಲವು ವಿಷಯಗಳಲ್ಲಿ ರಾಜ್ಯಪಾಲರು ಮತ್ತು ಮಮತಾ ಬ್ಯಾನರ್ಜಿ ಸರ್ಕಾರದ ನಡುವೆ ತಿಕ್ಕಾಟ ಉಂಟಾಗಿತ್ತು. ವಿಸಿ ನೇಮಕಾತಿ ಮುನ್ನ ರಾಜ್ಯಪಾಲರು ಸಮಾಲೋಚನೆ ಮಾಡಿಲ್ಲ. ರಾಜ್ಯ ಶಿಕ್ಷಣ ವ್ಯವಸ್ಥೆಯಲ್ಲಿ ರಾಜ್ಯಪಾಲರ ಹಸ್ತಕ್ಷೇಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT