ಐಎಲ್‌ಪಿ ಜಾರಿಯಲ್ಲಿರುವ ರಾಜ್ಯಗಳಿಗೆ ಭೇಟಿ ನೀಡಲು, ದೇಶದ ಬೇರೆ ರಾಜ್ಯಗಳ ಜನರು ಸರ್ಕಾರದಿಂದ ಏಳು ದಿನಗಳ ಪರ್ಮಿಟ್ ಪಡೆಯಬೇಕಾಗುತ್ತದೆ. ಈ ರಾಜ್ಯಗಳನ್ನು ಸಂರಕ್ಷಿತ ಪ್ರದೇಶಗಳು ಎಂದು ಗುರುತಿಸಲಾಗಿದೆ. ಹೀಗಾಗಿ ಹೊರಗಿನ ವ್ಯಕ್ತಿಗಳು ಇಲ್ಲಿಗೆ ಮುಕ್ತವಾಗಿ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ. ಮಣಿಪುರ, ನಾಗಾಲ್ಯಾಂಡ್, ಮಿಜೋರಾಂ ಮತ್ತು ಅರುಣಾಚಲ ಪ್ರದೇಶದಲ್ಲಿ ಈಗಾಗಲೇ ಈ ನಿಯಮ ಜಾರಿಯಲ್ಲಿದೆ.