ಶಿಲ್ಲಾಂಗ್: ಮೇಘಾಲಯದ ಪೂರ್ವ ಗಾರೊ ಹಿಲ್ಸ್ನಲ್ಲಿ, ಗುರುವಾರ ಮುಂಜಾನೆ 8ರಿಂದ ಮಧ್ಯಾಹ್ನ 1ಗಂಟೆವರೆಗೆ ಕರ್ಫ್ಯೂವನ್ನು ಸಡಿಲಿಸಲಾಯಿತು. ಈ ಅವಧಿಯಲ್ಲಿ ಜನರು ಅಗತ್ಯ ವಸ್ತುಗಳನ್ನು ಖರೀದಿಸಲು ಅನುವು ಮಾಡಿಕೊಡಲಾಯಿತು ಎಂದು ಅಧಿಕಾರಿಗಳು ತಿಳಿಸಿದರು.

ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಸ್ಎಡಿಸಿ) ಚುನಾವಣಾ ನಾಮಪತ್ರ ಸಲ್ಲಿಕೆ ವಿಚಾರವಾಗಿ ಉಂಟಾದ ಸಂಘರ್ಷ ಹತ್ತಿಕ್ಕಲು ಪೊಲೀಸರು ಗಾಳಿಯಲ್ಲಿ ಹಾರಿಸಿದ ಗುಂಡು ತಗುಲಿ ಇಬ್ಬರು ಮೃತಪಟ್ಟು, ಹಲವರು ಗಾಯಗೊಂಡಿದ್ದರು. ಬಳಿಕ ಪರಿಸ್ಥಿತಿ ನಿಯಂತ್ರಿಸಲು ಕರ್ಫ್ಯೂ ಜಾರಿ ಮಾಡಲಾಯಿತು. ಸದ್ಯ ಗುರುವಾರ ಮಧ್ಯರಾತ್ರಿವರೆಗೆ ಕರ್ಫ್ಯೂ ಮುಂದುವರಿಯಲಿದೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು, ರಾಜ್ಯ ಸರ್ಕಾರವು ಗಾರೊ ಹಿಲ್ಸ್ ಪ್ರದೇಶದ 5 ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಿ ಆದೇಶಿಸಿದೆ. ಸ್ಥಳದಲ್ಲಿ ಸೇನೆ ಸೇರಿದಂತೆ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.