ಇಂದೋರ್ (ಮಧ್ಯಪ್ರದೇಶ): ಮೇಘಾಲಯ ಹನಿಮೂನ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸೋನಮ್ ಮತ್ತು ಆಕೆಯ ಪ್ರಿಯಕರ ರಾಜ್ನನ್ನು ಮಂಪರು ಪರೀಕ್ಷೆಗೆ ಒಳಪಡಿಸುವಂತೆ ಕೋರಿ ಹತ್ಯೆಗೀಡಾದ ಇಂದೋರ್ ಉದ್ಯಮಿ ರಾಜಾ ರಘುವಂಶಿ ಅವರ ಹಿರಿಯ ಸಹೋದರ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.

ನನ್ನ ಸಹೋದರನ ಕೊಲೆಯ ಹಿಂದಿನ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ. ಹಾಗಾಗಿ ಸೋನಮ್ ಮತ್ತು ರಾಜ್ನನ್ನು ಮಂಪರು ಪರೀಕ್ಷೆಗೆ ಒಳಪಡಿಸಿದರೆ ಸತ್ಯಾಂಶ ಹೊರಬರುತ್ತದೆ ಎಂದು ರಾಜಾ ರಘುವಂಶಿ ಅವರ ಹಿರಿಯ ಸಹೋದರ ವಿಪಿನ್ ರಘುವಂಶಿ ಹೇಳಿದ್ದಾರೆ.

ರಾಜಾ ರಘುವಂಶಿ–ಸೋನಮ್ ಮೇ 1ರಂದು ವಿವಾಹವಾಗಿದ್ದರು. ಮಧುಚಂದ್ರಕ್ಕಾಗಿ ಮೇಘಾಲಯಕ್ಕೆ ತೆರಳಿದ್ದಾಗ ಮೇ 23ರಿಂದ ದಂಪತಿ ನಾಪತ್ತೆಯಾಗಿದ್ದರು. ಜೂನ್ 2ರಂದು ರಘುವಂಶಿ ಅವರ ಶವ ಶಿಲ್ಲಾಂಗ್ ಸಮೀಪದ ಜಲಪಾತದ ಕಮರಿಯಲ್ಲಿ ಸಿಕ್ಕಿತ್ತು.

ರಘುವಂಶಿ ಅವರ ಹತ್ಯೆಗೆ ಸಂಚು ನಡೆಸಿದ ಆರೋಪದ ಮೇಲೆ ಸೋನಮ್, ಆಕೆಯ ಪ್ರಿಯಕರ ರಾಜ್, ವಿಶಾಲ್, ಆಕಾಶ್, ಆನಂದ್ ಸೇರಿದಂತೆ ಒಟ್ಟು ಏಳು ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಈಚೆಗೆ ಮೇಘಾಲಯದ ನ್ಯಾಯಾಲಯವು ಆರೋಪಿಗಳನ್ನು 13 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.
.ರಾಜಾ ರಘುವಂಶಿ ಹತ್ಯೆ ಪ್ರಕರಣ: ಮಧ್ಯಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ಬಂಧನ.ರಾಜಾ ರಘುವಂಶಿ ಹತ್ಯೆ: ಆರೋಪಿಗಳಿಗೆ ನ್ಯಾಯಾಂಗ ಬಂಧನ.ರಾಜಾ ರಘುವಂಶಿ ಕೊಲೆ ಪ್ರಕರಣ: ಸೋನಮ್ ಕುಟುಂಬಸ್ಥರ ವಿಚಾರಣೆ .Meghalaya murder | ರಾಜಾ ರಘುವಂಶಿ ಕೊಲೆ; ಕೃತ್ಯದ ಮರುಸೃಷ್ಟಿ.ಸೋನಮ್ ನನ್ನ ಮಗನಿಗೆ ಮಾಟ–ಮಂತ್ರ ಮಾಡಿಸಿರಬಹುದು: ರಾಜಾ ರಘುವಂಶಿ ತಂದೆ ಅನುಮಾನ.Honeymoon Murder: ರಾಜ ರಘುವಂಶಿ ಅಂತ್ಯಕ್ರಿಯೆಗೆ ಜನರನ್ನು ಕರೆದೊಯ್ದಿದ್ದ ಆರೋಪಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.