ನವದೆಹಲಿ: ಎಸ್‌ಸಿ, ಎಸ್‌ಟಿಗಳಿರುವ ಮೀಸಲಾತಿಯಲ್ಲಿ ಕೆನೆಪದರ ಕುರಿತು ಸುಪ್ರೀಂ ಕೋರ್ಟ್‌ನ ಟಿಪ್ಪಣಿಗೆ ಸಂಬಂಧಿಸಿ ವಿರೋಧ ಪಕ್ಷಗಳು ಜನರಲ್ಲಿ ಗೊಂದಲ ಸೃಷ್ಟಿಸುತ್ತಿವೆ ಎಂದು ಕಾನೂನು ಸಚಿವ ಅರ್ಜುನ್‌ರಾಮ್ ಮೇಘವಾಲ್ ಆರೋಪಿಸಿದ್ದಾರೆ.
‘ಪಿಟಿಐ ವಿಡಿಯೊಸ್’ಗೆ ಸಂದರ್ಶನ ನೀಡಿರುವ ಅವರು, ‘ಡಾ.ಬಿ.ಆರ್.ಅಂಬೇಡ್ಕರ್ ರಚಿಸಿರುವ ಸಂವಿಧಾನದಡಿ ನೀಡಲಾಗಿರುವ ಮೀಸಲಾತಿಯಲ್ಲಿ ಕೆನೆಪದರಕ್ಕೆ ಅವಕಾಶ ಇಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.
‘ಕೆನೆಪದರ ಕುರಿತು ಸುಪ್ರೀಂ ಕೋರ್ಟ್ ತನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ ಎಂಬುದು ವಿರೋಧ ಪಕ್ಷಗಳಿಗೂ ಗೊತ್ತಿದೆ. ಆದಾಗ್ಯೂ ಅವು ಜನರಲ್ಲಿ ಗೊಂದಲ ಸೃಷ್ಟಿಸಲು ಯತ್ನಿಸುತ್ತಿವೆ’ ಎಂದೂ ಅವರು ಹೇಳಿದ್ದಾರೆ.