ಶ್ರೀನಗರ: ‘ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಹಾಗೂ ನನ್ನನ್ನು ಅಧಿಕಾರಿಗಳು ಗೃಹ ಬಂಧನದಲ್ಲಿರಿಸಿದ್ದಾರೆ’ ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ನಾಯಕಿ ಇಲ್ತಿಜಾ ಮುಫ್ತಿ ಆರೋಪಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಮೆಹಬೂಬಾ ಪುತ್ರಿ, ‘ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿರುವ ಸೊಪೊರ್ ಹಾಗೂ ಜಮ್ಮುವಿನ ಕಠುವಾಗೆ ಭೇಟಿ ನೀಡಲು ನಿರ್ಧರಿಸಿದ್ದೆವು. ಆದರೆ, ನಮ್ಮ ಮನೆಯ ಪ್ರವೇಶದ್ವಾರಕ್ಕೆ ಬೀಗ ಹಾಕಿ ಗೃಹ ಬಂಧನದಲ್ಲಿಡಲಾಗಿದೆ’ ಎಂದು ತಿಳಿಸಿದ್ದಾರೆ.

‘ಸೇನೆಯಿಂದ ಗುಂಡಿನ ದಾಳಿಗೊಳಗಾಗಿ ಮೃತಪಟ್ಟ ಸೊಪೊರ್ನ ವಾಸೀಂ ಮಿರ್, ಕಠುವಾದ ಮಖಾನ್ ದಿನ್ ಅವರನ್ನು ಭೇಟಿಯಾಗಲು ನಿರ್ಧರಿಸಿದ್ದೆವು. ಆದರೆ, ಮನೆಯ ಗೇಟ್ಗೆ ಬೀಗಹಾಕಲಾಗಿದೆ. ಚುನಾವಣಾ ನಡೆದ ಬಳಿಕವೂ ಕಾಶ್ಮೀರದಲ್ಲಿನ ಪರಿಸ್ಥಿತಿ ಬದಲಾಗಿಲ್ಲ. ಸಂತ್ರಸ್ತರ ಕುಟುಂಬಸ್ಥರನ್ನು ಭೇಟಿಯಾಗದಂತೆ ಸರ್ಕಾರವು ತಡೆಯುತ್ತಿದೆ’ ಎಂದು ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.