ಶ್ರೀನಗರ: ಸಾರ್ವಜನಿಕ ಸುರಕ್ಷತೆ ಕಾಯ್ದೆಯಡಿ (ಪಿಎಸ್‌ಎ) ಬಂಧಿಸಿದ್ದಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರನ್ನು ಮಂಗಳವಾರ ತಡರಾತ್ರಿ ಬಿಡುಗಡೆ ಮಾಡಲಾಗಿದೆ.

ಜಮ್ಮು ಮತ್ತು ಕಾಶ್ಮೀರ ಆಡಳಿತದ ಮುಖ್ಯ ಕಾರ್ಯದರ್ಶಿ ರೋಹಿತ್ ಕನ್ಸಾಲ್ ಅವರುಮೆಹಬೂಬಾ ಮುಫ್ತಿ ಅವರನ್ನು ಗೃಹ ಬಂಧನದಿಂದ ಬಿಡುಗಡೆ ಮಾಡಲಾಗಿದೆ ಎಂದುಮಂಗಳವಾರ ಟ್ವೀಟ್ ಮಾಡಿದ್ದಾರೆ.

ಕಾಶ್ಮೀರಕ್ಕೆ ವಿಶೇಷ ಸ್ಥಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸಿದ ನಂತರ ಮುಫ್ತಿ ಅವರನ್ನು ಕಳೆದ 14 ತಿಂಗಳುಗಳಿಂದ ಗೃಹ ಬಂಧನದಲ್ಲಿ ಇರಿಸಲಾಗಿತ್ತು. ಜಮ್ಮು ಮತ್ತು ಕಾಶ್ಮೀರ ಆಡಳಿತಮೆಹಬೂಬಾ ಮುಫ್ತಿ ಅವರ ಬಂಧನದ ಅವಧಿಯನ್ನು ಎರಡು ಸಲ ವಿಸ್ತರಣೆ ಮಾಡಿತ್ತು.

ಮುಫ್ತಿ ಅವರ ಬಂಧನದ ಅವಧಿಯನ್ನು ಪದೇ ಪದೇ ವಿಸ್ತರಣೆ ಮಾಡುವುದನ್ನು ಪ್ರಶ್ನಿಸಿ ಅವರ ಪುತ್ರಿ ಸುಪ್ರೀಂ ಕೋರ್ಟ್‌ನಲ್ಲಿ ಕಾಶ್ಮೀರ ಆಡಳಿತ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಹೇಬಿಯಸ್ ಕಾರ್ಪಸ್ ರಿಟ್ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯ ಸೆ. 29ರಂದು ಇದರ ವಿಚಾರಣೆ ನಡೆಸಿತ್ತು.

‘ಮೆಹಬೂಬಾ ಮುಫ್ತಿ ಅವರನ್ನು ಇನ್ನು ಎಷ್ಟು ದಿನಗಳವರೆಗೆ ಬಂಧನದಲ್ಲಿಡಬಹುದು?‘ ಎಂದು ಸುಪ್ರೀಂ ಕೋರ್ಟ್ ಕೇಂದ್ರಹಾಗೂ ಕಾಶ್ಮೀರಆಡಳಿತವನ್ನು ಪ್ರಶ್ನಿಸಿತ್ತು. ಬಿಡುಗಡೆಗಾಗಿ ಕಾಶ್ಮೀರ ಆಡಳಿತ ಎರಡು ವಾರಗಳ ಕಾಲಾವಕಾಶ ಕೋರಿತ್ತು.

ಮೆಹಬೂಬ ಮುಫ್ತಿ ಅವರ ಬಂಧನದ ಅವಧಿಯನ್ನು ಫೆಬ್ರುವರಿ ಹಾಗೂ ಜುಲೈ ತಿಂಗಳಲ್ಲಿ ವಿಸ್ತರಣೆ ಮಾಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.