ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಡಿಪಿ ಅಧ್ಯಕ್ಷೆಯಾಗಿ ಮೆಹಬೂಬಾ ಪುನರಾಯ್ಕೆ

Published 26 ಅಕ್ಟೋಬರ್ 2023, 14:19 IST
Last Updated 26 ಅಕ್ಟೋಬರ್ 2023, 14:19 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೀಪಲ್ಸ್ ಡೆಮಾಕ್ರೆಟಿಕ್‌ ಪಕ್ಷದ (ಪಿಡಿಪಿ) ಅಧ್ಯಕ್ಷೆಯಾಗಿ ಮೆಹಬೂಬಾ ಮುಫ್ತಿ ಅವರು ಗುರುವಾರ ಪುನರಾಯ್ಕೆಯಾಗಿದ್ದಾರೆ.

ಪುನರಾಯ್ಕೆಯಾದ ಬಳಿಕ ಮುಫ್ತಿ ಅವರು 2024ರ ಲೋಕಸಭಾ ಚುನಾವಣೆಯ ಪ್ರಚಾರ ಕಾರ್ಯಕ್ಕೆ ವರ್ಚುವಲ್‌ ಆಗಿ ಚಾಲನೆ ನೀಡಿದರು. ಪಕ್ಷವನ್ನು ಬಲಪಡಿಸಲು ಕಾರ್ಯಪ್ರವೃತ್ತರಾಗುವಂತೆ ಕಾರ್ಯಕರ್ತರಿಗೆ ಅವರು ಕರೆ ನೀಡಿದರು.

‘ನಮ್ಮ ಸಾಮರ್ಥ್ಯವನ್ನು ಮರಳಿ ಪಡೆಯುವ ಸಲುವಾಗಿ ಮುಂಬರುವ ಚುನಾವಣೆ ಮಹತ್ವದ್ದಾಗಿದೆ. 2009ರ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಮಾಡಿರುವ ಸಾಧನೆ ಮರುಕಳಿಸಲಿದೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT