ನವದೆಹಲಿ: ಶ್ರದ್ಧಾ ವಾಲಕರ್ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಲು ಆರೋಪಿ ಆಫ್ತಾಬ್ ಅಮಿನ್ ಪೂನಾವಾಲಾ ಬಳಸಿದ್ದ ಎನ್ನಲಾದ ಆಯುಧವನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ಸೋಮವಾರ ತಿಳಿಸಿವೆ.

ಶ್ರದ್ಧಾ ಅವರ ಉಂಗುರವನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಉಂಗುರವನ್ನು ಪೂನಾವಾಲ ಮತ್ತೊಬ್ಬ ಮಹಿಳೆಗೆ ನೀಡಿದ್ದ ಎನ್ನಲಾಗಿದೆ. ಪೂನಾವಾಲಾ ಸುಳ್ಳುಪತ್ತೆ ಪರೀಕ್ಷೆಯು ರೋಹಿಣಿಯ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಪೂನಾವಾಲಾ ತನ್ನ ಸಹಜೀವನ ಸಂಗಾತಿ ಶ್ರದ್ಧಾಳನ್ನು ಹತ್ಯೆ ಮಾಡಿ, ಆಕೆಯ ಮೃತದೇಹವನ್ನು 35 ತುಂಡುಗಳಾಗಿ ಕತ್ತರಿಸಿದ್ದ. ಬಳಿಕ ಅವುಗಳನ್ನು ಫ್ರಿಜ್ನಲ್ಲಿಟ್ಟು ಹಲವು ದಿನಗಳ ಕಾಲ ನಗರದ ವಿವಿಧ ಭಾಗಗಳಲ್ಲಿ ಎಸೆದಿದ್ದ. ಪ್ರಕರಣ ಸಂಬಂಧ ಈತನನ್ನು ನ.12ರಂದು ಬಂಧಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.