ಚೆನ್ನೈ: ಕರ್ನಾಟಕ ಸರ್ಕಾರವು ಕಾವೇರಿ ನದಿಗೆ ಅಡ್ಡವಾಗಿ ನಿರ್ಮಿಸಲು ಉದ್ದೇಶಿಸಿರುವ ಮೇಕೆದಾಟು ಯೋಜನೆಗೆ ಭೂಮಿ ಪೂಜೆ ನೆರವೇರಿಸಲು ಸಿದ್ಧತೆ ನಡೆಸುತ್ತಿರುವ ಬೆನ್ನಲ್ಲೇ, ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.

ಮೇಕೆದಾಟು ಯೋಜನೆಗೆ ತಮಿಳುನಾಡು ಮೊದಲಿನಿಂದಲೂ ತೀವ್ರ ವಿರೋಧ ವ್ಯಕ್ತಪಡಿಸುತ್ತಾ ಬಂದಿದ್ದು, ಆ ನಿಟ್ಟಿನಲ್ಲಿ ರಾಜ್ಯದ ಹಕ್ಕುಗಳನ್ನು ಮರುಸ್ಥಾಪಿಸಲು ಮತ್ತು ರೈತರ ಹಿತಾಸಕ್ತಿಯನ್ನು ಕಾಯಲು ಪರಿಶೀಲನಾ ಸಭೆ ಆಯೋಜಿಸಲಾಗಿತ್ತು ಎಂದು ತಮಿಳುನಾಡು ಸರ್ಕಾರದ ಅಧಿಕೃತ ಪ್ರಕಟಣೆ ತಿಳಿಸಿದೆ.

ಮೇಕೆದಾಟು ವಿವಾದಕ್ಕೆ ಸಂಬಂಧಿಸಿದ ಕಾನೂನು ಪ್ರಕ್ರಿಯೆಗಳ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಯಿತು. ಈ ಹಿಂದೆ, ಸುಪ್ರೀಂ ಕೋರ್ಟ್ನ ಕಾನೂನು ವ್ಯಾಪ್ತಿಯನ್ನು ಕೇವಲ ಕೇಂದ್ರದ ತಜ್ಞರ ಸಮಿತಿಯಷ್ಟೇ ನಿರ್ಧರಿಸಬಹುದು ಎಂಬ ತೀರ್ಪಿನ ವಿರುದ್ಧ ತಮಿಳುನಾಡು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು.

‘ನ್ಯಾಯಾಲಯದ ಈ ಹಿಂದಿನ ಆದೇಶವನ್ನು ಗಮನದಲ್ಲಿಟ್ಟುಕೊಂಡು, ಹಿರಿಯ ವಕೀಲರೊಂದಿಗೆ ಸಮಾಲೋಚನೆ ನಡೆಸಿ ಕಾನೂನು ಹೋರಾಟದ ಮುಂದಿನ ಕ್ರಮಗಳನ್ನು ಚುರುಕುಗೊಳಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮುಖ್ಯಮಂತ್ರಿ ವಿಜಯ್ ನೇತೃತ್ವದಲ್ಲಿ ನಡೆದ ಈ ಮಹತ್ವದ ಸಭೆಯಲ್ಲಿ ಸಚಿವರಾದ ಎನ್. ಆನಂದ್, ಆಧವ್ ಅರ್ಜುನ, ಆರ್. ನಿರ್ಮಲ್ಕುಮಾರ್ ಮತ್ತು ತಮಿಳುನಾಡು ಸರ್ಕಾರದ ಅಡ್ವೊಕೇಟ್ ಜನರಲ್ ವಿಜಯ್ ನಾರಾಯಣ್ ಹಾಗೂ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.