ಮುಂಬೈ: ‘ನೀನು ತೆಳ್ಳಗೆ, ಬೆಳ್ಳಗೆ ಸುಂದರವಾಗಿದ್ದೀಯಾ’ ಎಂದು ಅಪರಿಚಿತ ಮಹಿಳೆಯೊಬ್ಬರಿಗೆ ರಾತ್ರಿ ಸಂದೇಶ ಕಳುಹಿಸುವುದನ್ನು ಅಶ್ಲೀಲ ಎಂಬುದಾಗಿ ಪರಿಗಣಿಸಲಾಗುವುದು ಎಂದು ಇಲ್ಲಿನ ಸೆಷನ್ಸ್ ನ್ಯಾಯಾಲಯ ಹೇಳಿದೆ.

ಮಹಿಳಾ ಮಾಜಿ ಕಾರ್ಪೊರೇಟರ್ ಒಬ್ಬರಿಗೆ ವಾಟ್ಸಾಪ್ನಲ್ಲಿ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಕ್ಕಾಗಿ ಆರೋಪಿಯ ಶಿಕ್ಷೆಯನ್ನು ಎತ್ತಿಹಿಡಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ (ದಿಂಡೋಶಿ) ಡಿ.ಜಿ. ಧೋಬ್ಲೆ ಅವರು ಈ ಅವಲೋಕನ ಮಾಡಿದ್ದಾರೆ.

ಅಶ್ಲೀಲತೆಯನ್ನು ಸಮಕಾಲೀನ ಸಮುದಾಯದ ಮಾನದಂಡಗಳನ್ನು ಅನ್ವಯಿಸುವ ಮೂಲಕ ನಿರ್ಣಯಿಸಬೇಕು ಎಂದಿರುವ ನ್ಯಾಯಾಲಯ, ಫೆಬ್ರುವರಿ 18ರ ವಿಚಾರಣಾ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದಿದೆ.

ದೂರುದಾರರಿಗೆ ರಾತ್ರಿ 11ರಿಂದ 12.30ರ ನಡುವೆ ‘ನೀನು ತೆಳ್ಳಗೆ, ಬೆಳ್ಳಗೆ ಸುಂದರವಾಗಿದ್ದೀಯಾ, ನಾನು ನಿನ್ನನ್ನು ಇಷ್ಟಪಡುತ್ತೇನೆ, ನನ್ನ ವಯಸ್ಸು 40, ನೀನು ಮದುವೆಯಾಗಿದ್ದೀಯಾ ಅಥವಾ ಇಲ್ಲವೇ?’ಎಂಬಿತ್ಯಾದಿ ಸಂದೇಶಗಳೊಂದಿಗೆ ಅಶ್ಲೀಲ ಚಿತ್ರಗಳನ್ನೂ ಕಳುಹಿಸಲಾಗಿರುವುದನ್ನು ನ್ಯಾಯಾಲಯ ಗಮನಿಸಿದೆ.

ಗೌರವದಿಂದ ಜೀವನ ನಡೆಸುತ್ತಿರುವ ಯಾವುದೇ ವಿವಾಹಿತ ಮಹಿಳೆ ಅಥವಾ ಅವರ ಪತಿ ಅಂತಹ ವಾಟ್ಸಾಪ್ ಸಂದೇಶಗಳು ಮತ್ತು ಅಶ್ಲೀಲ ಫೋಟೊಗಳನ್ನು ಸಹಿಸುವುದಿಲ್ಲ, ವಿಶೇಷವಾಗಿ ಸಂದೇಶ ಕಳುಹಿಸಿದವರು ಮತ್ತು ದೂರುದಾರರು ಪರಸ್ಪರ ಪರಿಚಿತರಲ್ಲದಿದ್ದಾಗ ಒಪ್ಪಿಕೊಳ್ಳಲಾಗುವುದಿಲ್ಲ ಎಂದು ನ್ಯಾಯಾಲಯವು ಹೇಳಿದೆ.

ದೂರುದಾರರ ಜೊತೆ ಯಾವುದೇ ಸಂಬಂಧವಿರುವ ಬಗ್ಗೆ ಆಪಾದಿತರು ಯಾವುದೇ ದಾಖಲೆ ಸಲ್ಲಿಸಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಈ ರೀತಿಯ ಅಶ್ಲೀಲ ಸಂದೇಶ ಕಳುಹಿಸಿರುವುದು ಮಹಿಳೆಯ ಘನತೆಗೆ ಧಕ್ಕೆಯಾಗಿದೆ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ 2022ರಲ್ಲಿ ತೀರ್ಪು ನೀಡಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ, ಆರೋಪಿಯು ತಪ್ಪಿತಸ್ಥನೆಂದು ಹೇಳಿತ್ತು. ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿತ್ತು. ಬಳಿಕ, ಆ ಆದೇಶ ಪ್ರಶ್ನಿಸಿ ಆರೋಪಿ ಸೆಷನ್ಸ್ ನ್ಯಾಯಾಲಯದ ಮೊರೆ ಹೋಗಿದ್ದ. ರಾಜಕೀಯ ದುರುದ್ದೇಶದಿಂದ ನನ್ನನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ವಾದಿಸಿದ್ದ. ಆದರೆ, ನ್ಯಾಯಾಲಯವು ಆರೋಪಿಯ ವಾದವನ್ನು ತಿರಸ್ಕರಿಸಿದ್ದು, ಇದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿದೆ. ಆದ್ದರಿಂದ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿರುವುದಾಗಿ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.