ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೆಟ್ಟೂರು ಜಲಾಶಯ: ನೀರು ಹೊರಕ್ಕೆ, ಕಾವೇರಿ ಪ್ರದೇಶದಲ್ಲಿ ಭಾರಿ ಮಳೆ ನಿರೀಕ್ಷೆ

Last Updated 9 ನವೆಂಬರ್ 2021, 20:00 IST
ಅಕ್ಷರ ಗಾತ್ರ

ಚೆನ್ನೈ: ಕಾವೇರಿ ಜಲಾಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ, ತಮಿಳುನಾಡಿನ ಮೆಟ್ಟೂರು ಜಲಾಶಯವು ಬಹುತೇಕ ಭರ್ತಿಯಾಗಿದೆ. ಹೀಗಾಗಿ ಜಲಾಶಯದಿಂದ ಈಗ ನೀರನ್ನು ಹೊರಬಿಡಲಾಗಿದೆ. ತಮಿಳುನಾಡಿನಲ್ಲಿ ಕಾವೇರಿ ನದಿ ಹರಿದುಹೋಗುವ 11 ಜಿಲ್ಲೆಗಳ ನದಿ ದಡದ ಗ್ರಾಮಗಳಲ್ಲಿ ಪ್ರವಾಹದ ಎಚ್ಚರಿಕೆ ನೀಡಲಾಗಿದೆ.

ಮೆಟ್ಟೂರು ಜಲಾಶಯವು 120 ಅಡಿ ಎತ್ತರವಿದೆ. ಮಂಗಳವಾರ ಜಲಾಶಯದಲ್ಲಿ 119 ಅಡಿಯಷ್ಟು ನೀರು ಸಂಗ್ರಹವಾಗಿತ್ತು. ಈಗ ಜಲಾಶಯದಲ್ಲಿ ಒಟ್ಟು 91.883 ಟಿಎಂಸಿ ನೀರು ಸಂಗ್ರಹವಾಗಿದೆ. ಇಷ್ಟೇ ಪ್ರಮಾಣದ ನೀರನ್ನು ಕಾಯ್ದುಕೊಳ್ಳಲಾಗುತ್ತದೆ. ಜಲಾ
ಶಯಕ್ಕೆ 19,290 ಕ್ಯುಸೆಕ್ ಹರಿದುಬರುತ್ತಿದ್ದು, 20,150 ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ಬುಧವಾರ ಮತ್ತು ಗುರುವಾರವೂ ಭಾರಿ ಮಳೆಯಾಗುವ ನಿರೀಕ್ಷೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT