ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಣಿಪುರ: ಸಿಎಪಿಎಫ್‌ ಸಿಬ್ಬಂದಿ ಪ್ರಯಾಣಕ್ಕೆ ವಿಮಾನ ಸೇವೆ ವಿಸ್ತರಣೆ

Published 7 ಮಾರ್ಚ್ 2024, 13:22 IST
Last Updated 7 ಮಾರ್ಚ್ 2024, 13:22 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಗೃಹ ಸಚಿವಾಲಯವು ಮಣಿಪುರದ ರಾಜಧಾನಿ ಇಂಫಾಲ್‌ ಮತ್ತು ಕೋಲ್ಕತ್ತ ನಡುವೆ ಪ್ರಯಾಣಿಸುವ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ (ಸಿಎಪಿಎಫ್) ಸಿಬ್ಬಂದಿಗೆ ವಾರದಲ್ಲಿ ಮೂರು ದಿನಗಳ ಬದಲಿಗೆ ಆರು ದಿನಗಳವರೆಗೆ ಚಾರ್ಟರ್ಡ್ ವಿಮಾನಗಳ ಲಭ್ಯತೆಯನ್ನು ದ್ವಿಗುಣಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದಿಂದಾಗಿ ನಿರಂತರ ನಿಯೋಜನೆಗೆ ಒಳಗಾಗಿರುವ ಸಿಆರ್‌ಪಿಎಫ್‌, ಬಿಎಸ್‌ಎಫ್‌, ಐಟಿಬಿಪಿ, ಸಿಐಎಸ್‌ಎಫ್‌ ಮತ್ತು ಗುಪ್ತಚರ ಬ್ಯೂರೊ, ಎನ್‌ಐಎ, ಎನ್‌ಡಿಆರ್‌ಎಫ್‌ ಸೇರಿದಂತೆ ಕೇಂದ್ರ ಗೃಹ ಸಚಿವಾಲಯದಡಿ ಬರುವ ಸಂಸ್ಥೆಗಳು ಈ ವಿಸ್ತರಿತ ಸೇವೆಯನ್ನು ಸೆಪ್ಟೆಂಬರ್‌ 30ರವರೆಗೆ ಪಡೆಯಬಹುದಾಗಿದೆ ಎಂದು ಅವರು ಹೇಳಿದ್ದಾರೆ. 

2023ರ ಮೇ 3ರಂದು ಮಣಿಪುರದಲ್ಲಿ ಮೈತೇಯಿ ಮತ್ತು ಕುಕಿ ಗುಂಪುಗಳ ನಡುವೆ ಜನಾಂಗೀಯ ಹಿಂಸಾಚಾರ ಭುಗಿಲೆದ್ದಿತ್ತು. ಈ ಹಿಂಸಾಚಾರದಲ್ಲಿ ಒಟ್ಟು 219 ಜನರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT