ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

CAA-2019: ಪೌರತ್ವದ ಅರ್ಜಿ ಸಲ್ಲಿಕೆಗೆ ಮೊಬೈಲ್‌ ಆ್ಯಪ್‌ ಬಿಡುಗಡೆ

Published 15 ಮಾರ್ಚ್ 2024, 14:49 IST
Last Updated 15 ಮಾರ್ಚ್ 2024, 14:49 IST
ಅಕ್ಷರ ಗಾತ್ರ

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯಡಿ ಭಾರತದ ಪೌರತ್ವ ಪಡೆಯಲು ಅರ್ಹರಾದವರು ಅರ್ಜಿ ಸಲ್ಲಿಸಲು ವಿದೇಶಾಂಗ ಸಚಿವಾಲಯ ಮೊಬೈಲ್‌ ಆ್ಯಪ್‌ ಅನ್ನು ಬಿಡುಗಡೆ ಮಾಡಿದೆ.

ಆ‍್ಯಪ್‌ ಅನ್ನು ಗೂಗಲ್‌ ಪ್ಲೇ ಸ್ಟೋರ್‌ ಮೂಲಕ ಡೌನ್‌ಲೋಡ್‌ ಮಾಡಿಕೊಳ್ಳಬಹುದು ಎಂದು ವಿದೇಶಾಂಗ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ. indiancitizenshiponline.nic.in

ಪೌರತ್ವ ತಿದ್ದುಪಡಿ ಕಾಯಿದೆ (ಸಿಎಎ) 2019ರ ಅಡಿಯಲ್ಲಿ  ಪೌರತ್ವ ಪಡೆಯಲು ಅರ್ಜಿಗಳನ್ನು ಸಲ್ಲಿಸಲು 'CAA-2019' ಮೊಬೈಲ್ ಅಪ್ಲಿಕೇಶನ್ ಕಾರ್ಯನಿರ್ವಹಿಸುತ್ತಿದೆ’ ವಕ್ತಾರರು ಹೇಳಿದ್ದಾರೆ.

ಈ ಮುಂಚೆ ಸಚಿವಾಲಯ ಅರ್ಜಿ ಸಲ್ಲಿಸಲು ವೆಬ್‌ ಪೋರ್ಟಲ್‌ ಅನ್ನು ಪ್ರಾರಂಭಿಸಿತ್ತು.

'ಪೌರತ್ವ ತಿದ್ದುಪಡಿ ಕಾಯ್ದೆ'ಯಡಿ (ಸಿಎಎ) ಯಾವುದೇ ದಾಖಲೆಗಳು ಇಲ್ಲದೆ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಗಾನಿಸ್ತಾನದಿಂದ 2014ರ ಡಿಸೆಂಬರ್ 31ಕ್ಕೆ ಪೂರ್ವದಲ್ಲಿ ಭಾರತ ಪ್ರವೇಶಿಸಿದ ಮುಸ್ಲಿಮೇತರರಿಗೆ ಭಾರತದ ಪೌರತ್ವವನ್ನು ಈ ಕಾಯ್ದೆಯು ನೀಡುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT