ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸ್ ಖರೀದಿ ಒಪ್ಪಂದಸಿಬಿಐನಿಂದ ಪ್ರಾಥಮಿಕ ತನಿಖೆಗೆ ಕೇಂದ್ರದ ಶಿಫಾರಸು

Last Updated 19 ಆಗಸ್ಟ್ 2021, 11:01 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಸರ್ಕಾರದಿಂದ ನಡೆದ 1 ಸಾವಿರ ಬಸ್‌ಗಳನ್ನು ಖರೀದಿಸುವ ಒಪ್ಪಂದ ಕುರಿತಂತೆ ಸಿಬಿಐನಿಂದ ಪ್ರಾಥಮಿಕ ತನಿಖೆ ನಡೆಸಬೇಕು ಎಂದು ಕೇಂದ್ರ ಗೃಹ ಸಚಿವಾಲಯ ಶಿಫಾರಸು ಮಾಡಿದೆ.

ಬಸ್‌ಗಳ ವಾರ್ಷಿಕ ನಿರ್ವಹಣೆ ಒಪ್ಪಂದದಲ್ಲಿ (ಎಎಂಸಿ) ಭ್ರಷ್ಟಾಚಾರ ಆಗಿದೆ ಎಂದು ಇದೇ ವರ್ಷದ ಮಾರ್ಚ್ ತಿಂಗಳು ನಡೆದಿದ್ದ ದೆಹಲಿ ವಿಧಾನಸಭೆಯ ಅಧಿವೇಶನದಲ್ಲಿ ಬಿಜೆಪಿಯು ಗಮನ ಸೆಳೆದಿತ್ತು.

ದೆಹಲಿಯ ಲೆಫ್ಟಿನಂಟ್ ಗವರ್ನರ್ ರಚಿಸಿದ್ದ ತ್ರಿಸದಸ್ಯರ ಸಮಿತಿಯು, ಖರೀದಿ ಪ್ರಕ್ರಿಯೆಯಲ್ಲಿ ಲೋಪವಾಗಿದೆ ಎಂದು ಗುರುತಿಸಿದ್ದು, ಖರೀದಿ ಒಪ್ಪಂದವನ್ನು ರದ್ದುಪಡಿಸಬೇಕು ಎಂದು ಶಿಫಾರಸು ಮಾಡಿತ್ತು. ಈ ವಿಷಯವನ್ನು ಪರಿಶೀಲಿಸಬೇಕು ಎಂದು ನಂತರ ಲೆಫ್ಟಿನಂಟ್ ಗವರ್ನರ್ ಅವರು, ಕೇಂದ್ರ ಗೃಹ ಸಚಿವಾಲಯಕ್ಕೆ ಒಪ್ಪಿಸಿದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT