ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಿಚಾಂಗ್‌ ಚಂಡಮಾರುತ ಅಬ್ಬರ: ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ

Published 6 ಡಿಸೆಂಬರ್ 2023, 9:57 IST
Last Updated 6 ಡಿಸೆಂಬರ್ 2023, 9:57 IST
ಅಕ್ಷರ ಗಾತ್ರ

ಬೆಂಗಳೂರು: ಮಿಚಾಂಗ್‌ ಚಂಡಮಾರುತದ ಪರಿಣಾಮದಿಂದಾಗಿ ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಪ್ರಧಾನಿ, ಮಿಚಾಂಗ್‌ ಚಂಡಮಾರುತದ ಪರಿಣಾಮದಿಂದಾಗಿ ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿನ ಕೆಲವು ಕುಟುಂಬಗಳು ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡು ನೋವಿನಲ್ಲಿವೆ. ಈ ಸಂದರ್ಭದಲ್ಲಿ ಆ ಕುಟುಂಬಗಳು ಧೈರ್ಯದಿಂದ ಇರಬೇಕು. ಈ ನಡುವೆ ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲೇಂದು ಪ್ರಾರ್ಥಿಸುತ್ತೇನೆ. ಸ್ಥಳೀಯ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಹಾಗೂ ಪ್ರವಾಹ ಪೀಡಿತ ಪ್ರದೇಶಗಳು ಸಾಮಾನ್ಯ ಸ್ಥಿತಿಗೆ ಬರುವವರೆಗೂ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

ಮಿಚಾಂಗ್‌ ಚಂಡಮಾರುತದ ಪರಿಣಾಮದಿಂದಾಗಿ ಧಾರಾಕಾರ ಮಳೆಯಾಗಿದೆ. ಮಳೆ ಸಂಬಂಧಿತ ಅವಘಡಗಳಲ್ಲಿ ಮೃತಪಟ್ಟವರ ಸಂಖ್ಯೆ 12ಕ್ಕೆ ಏರಿದ್ದು, ಇತರೆ 11 ಮಂದಿ ಗಾಯಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT