ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಸ್ಥಾನದಲ್ಲಿ ವಾಯುಪಡೆಯ ಮಿಗ್–21 ಯುದ್ಧ ವಿಮಾನ ಪತನ: ಇಬ್ಬರು ನಾಗರಿಕರ ಸಾವು

Published 8 ಮೇ 2023, 6:15 IST
Last Updated 8 ಮೇ 2023, 6:28 IST
ಅಕ್ಷರ ಗಾತ್ರ

ನವದೆಹಲಿ: ಭಾರತೀಯ ವಾಯುಪಡೆಯ ಮಿಗ್–21 ಯುದ್ಧ ವಿಮಾನವು ರಾಜಸ್ಥಾನದ ಹನುಮಗಢ ಜಿಲ್ಲೆಯಲ್ಲಿ ಪತನಗೊಂಡಿದ್ದು, ಸ್ಥಳದಲ್ಲಿದ್ದ ಇಬ್ಬರು ನಾಗರಿಕರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಮಾನದ ಪೈಲಟ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ರುಕ್ಮಣಿ ರಿಯಾರ್ ತಿಳಿಸಿದ್ದಾರೆ.

ಹನುಮಗಢದ ಪಿಲಿಬಂಗಾ ಪ್ರದೇಶದಲ್ಲಿ ವಿಮಾನ ಪತನಗೊಂಡಿದ್ದು, ಇಬ್ಬರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ ಎಂದು ಬಿಕನೇರ್ ಐಜಿಪಿ ಓಂ ಪ್ರಕಾಶ್ ತಿಳಿಸಿದ್ದಾರೆ.

ಜನರ ಸಾವು ತಪ್ಪಿಸಲು ಪೈಲಟ್ ಸಾಧ್ಯವಾದ ಎಲ್ಲ ಪ್ರಯತ್ನಗಳನ್ನೂ ಮಾಡಿದ್ದಾರೆ. ಕೆಲವರು ಗಂಭೀರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅವರು ಎಂದು ಪ್ರಕಾಶ್ ಹೇಳಿದ್ದಾರೆ.

ವಿಮಾನ ಪತನದ ಸ್ಥಳದಲ್ಲಿ ಸುಮಾರು 2,000 ಮಂದಿ ಸೇರಿದ್ದು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮತ್ತು ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT