ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ: ಕಾರು ಮೇಲೆ ಒರಗಿದ್ದಕ್ಕೆ ವಲಸೆ ಕುಟುಂಬದ ಬಾಲಕನ ಎದೆಗೆ ಒದ್ದ ಮಾಲೀಕ

Last Updated 4 ನವೆಂಬರ್ 2022, 10:05 IST
ಅಕ್ಷರ ಗಾತ್ರ

ತಿರುವನಂತಪುರ: ಕಾರಿನ ಮೇಲೆ ಒರಗಿ ನಿಂತಿದ್ದಕ್ಕೆ ಅದರ ಮಾಲೀಕ ಬಾಲಕನಿಗೆ ಥಳಿಸಿದ ಅಮಾನವೀಯ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ.

ಕಣ್ಣೂರಿನ ತಲಷೇರಿಯಲ್ಲಿ ಗುರುವಾರ ರಾತ್ರಿ 8.30ರ ಸುಮಾರಿಗೆ ಈ ಘಟನೆ ನಡೆದಿದೆ. ಬಾಲಕನನ್ನು ಅಮಾನುಷವಾಗಿ ಒದೆಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆಯೇ ಪೊಲೀಸರು ಆರೋಪಿ ಪೊನ್ನಿಯಂಪಾಲಂ ನಿವಾಸಿ ಶಿಹಶಾದ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಆತನನ್ನು ವಶಕ್ಕೆ ಪಡೆದಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವಿಡಿಯೊದಲ್ಲಿ 6 ವರ್ಷದ ಬಾಲಕನೊಬ್ಬ ಕಾರಿಗೆ ಒರಗಿ ನಿಂತಿರುವುದು ಕಂಡುಬಂದಿದೆ. ಇದನ್ನು ಗಮನಿಸಿ, ಕಾರಿನಿಂದ ಹೊರಗೆ ಬಂದ ವ್ಯಕ್ತಿ, ಬಾಲಕನಿಗೆ ಗದರಿ, ಎದೆಗೆ ಕಾಲಿನಿಂದ ಒದ್ದಿದ್ದಾನೆ. ಏನೂ ತಿಳಿಯದ ಬಾಲಕ ಸದ್ದಿಲ್ಲದೆ ಅಲ್ಲಿಂದ ದೂರ ಸರಿದಿದ್ದಾನೆ. ಬಳಿಕ ವ್ಯಕ್ತಿ ಮತ್ತೆ ಕಾರಿನೊಳಗೆ ಹೋಗಲು ಮುಂದಾಗುತ್ತಾನೆ. ಘಟನೆಯನ್ನು ವೀಕ್ಷಿಸಿದ ಸ್ಥಳೀಯರು ಆತನನ್ನು ಸುತ್ತುವರಿದು ಪ್ರಶ್ನಿಸಿರುವುದು ವಿಡಿಯೊದಲ್ಲಿ ಸೆರೆಯಾಗಿದೆ.

ಹಲ್ಲೆಗೊಳಗಾಗದ ಬಾಲಕ ರಾಜಸ್ಥಾನದ ವಲಸೆ ಕಾರ್ಮಿಕ ಕುಟುಂಬದವನುಎಂದು ತಿಳಿದುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT