ಟ್ರಾಲ್ ಅರಣ್ಯದ ಬ್ರನ್ಪತ್ರಿ ಪ್ರದೇಶದಲ್ಲಿ ಉಗ್ರರು ಅಡಗಿರುವ ನಿಖರ ಮಾಹಿತಿ ಪಡೆದಿದ್ದ ಭದ್ರತಾ ಪಡೆ ಬುಧವಾರ ಮುಂಜಾನೆ ಕಾರ್ಯಾಚರಣೆಗೆ ಇಳಿದಿತ್ತು. ‘ಈ ಸಂದರ್ಭದಲ್ಲಿ ಉಗ್ರರು ಮತ್ತು ಭದ್ರತಾಪಡೆ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಘಟನೆಯಲ್ಲಿ ಒಬ್ಬ ಉಗ್ರ ಮೃತಪಟ್ಟಿದ್ದಾನೆ. ಭದ್ರತಾ ಪಡೆ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಉಗ್ರ ಯಾವ ಸಂಘಟನೆಯವ ಎನ್ನುವುದನ್ನು ಖಚಿತಪಡಿಸಿಕೊಳ್ಳಲಾಗುತ್ತಿದೆ ’ ಎಂದು ಪೊಲೀಸರು ತಿಳಿಸಿದ್ದಾರೆ.